ಸಂಗ್ರಹ ಚಿತ್ರ 
ರಾಜ್ಯ

ಹಣದ ವಿಚಾರಕ್ಕೆ ಜಗಳ: ಸ್ನೇಹಿತನ ರುಂಡ ಕತ್ತರಿಸಿ ಬರ್ಬರ ಹತ್ಯೆ

ಹಣದ ವಿಚಾರವಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಬೆಳಗಾವಿ: ಹಣದ ವಿಚಾರವಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿ ಅಕ್ಬರ್ ಶಬ್ಬೀರ್ ಜಮಾದಾರ (22) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಸ್ತವಾಡ ಗ್ರಾಮದ ಮಹಾಂತೇಶ ಸೋಮನಿಂಗ್ ಪೂಜಾರಿ (24) ಎಂದು ಗುರುತಿಸಲಾಗಿದೆ.

ಸಾಲವಾಗಿ ನೀಡಲಾಗಿದ್ದ ಹಣವನ್ನು ವಾಪಸ್ ನೀಡುವಂತೆ ಅಕ್ಬರ್ ಆರೋಪಿ ಮಹಾಂತೇಶ್ ನನ್ನು ಕೇಳಿದ್ದು, ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.

ಬಳಿಕ ಸ್ನೇಹಿತನ ಮೇಲೆ ದ್ವೇಷ ಬೆಳೆಸಿಕೊಂಡ ಮಹಾಂತೇಶ್, ಸಂಚು ರೂಪಿಸಿದ ಬಸ್ತವಾಡ -ಬರ್ನಾಲ್ ರಸ್ತೆಗೆ ಬರುವಂತೆ ಸ್ನೇಹಿತ ಅಕ್ಬರ್'ಗೆ ತಿಳಿಸಿದ್ದಾರೆ. ಮಹಾಂತೇಶ್ ಸೂಚನೆಯಂತೆ ಸ್ಥಳಕ್ಕೆ ತೆರಳಿದ ಅಕ್ಬರ್ ಮೇಲೆ ಹಲ್ಲೆ ನಡೆಸಿ ಶಿರಚ್ಛೇದ ಮಾಡಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬಳಿಕ ಸಾಕ್ಷ್ಯವನ್ನು ನಾಶಪಡಿಸಲು, ತಲೆಯನ್ನು ನಿರ್ಜನ ಪ್ರದೇಶಕ್ಕೆ ಎಸೆದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ನಡುವೆ ಗ್ರಾಮಸ್ಥರು ತಲೆ ಇಲ್ಲದ ಶವವನ್ನು ಕಂಡು ಹಾರೂಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಪ್ರಕರಣ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಮಹಾಂತೇಶನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ