ರಾಜ್ಯ

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳನ್ನು 3 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

Nagaraja AB

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದ  ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಕೃಷಿ ಇಲಾಖೆ ಸಚಿವರ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ ಆರೋಪ ಮೇರೆಗೆ ಮೈಸೂರು ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್​ ಎನ್ನುವರನ್ನು ಸಿಐಡಿ ಅಧಿಕಾರಿಗಳು ಭಾನುವಾರ ಬೆಳಗ್ಗೆ ಬಂಧಿಸಿದ್ದರು. ಕಚೇರಿಯಲ್ಲಿದ್ದ ಕೆಲವೊಂದು ದಾಖಲಾತಿಗಳನ್ನು ವಶಕ್ಕೆ ಪಡೆದು ಬಂಧಿತರನ್ನು ಅಜ್ಞಾತ ಸ್ಥಳಕ್ಕೆ ಕೊಂಡೊಯ್ದು ವಿಚಾರಣೆ ನಡೆಸುತ್ತಿದ್ದರು. 

ಸಚಿವ ಚಲುವರಾಯಸ್ವಾಮಿ . 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದರು.

ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿಉಲ್ಲೇಖಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಪ್ರಕರಣದ ತನಿಖೆಗೆಯನ್ನು ಸಿಐಡಿಗೆ ವಹಿಸಿತ್ತು.
 

SCROLL FOR NEXT