ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ವಂಚನೆಗೆ ಯತ್ನಿಸಿದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಬಂಧನ

ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಇತರಿಗೆ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕೇರಳದ 25 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
Ramyashree GN
Updated On : 21 Aug 2023, 4:08 pm

ಮಂಗಳೂರು: ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಇತರಿಗೆ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಕೇರಳದ 25 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬೆನೆಡಿಕ್ಟ್ ಸಾಬು ಎಂದು ಗುರುತಿಸಲಾಗಿದ್ದು, ಕೇರಳದ ನಿವಾಸಿ ಎನ್ನಲಾಗಿದೆ. ಅವರು ಮಂಗಳೂರಿನ ಕಾಲೇಜೊಂದರಲ್ಲಿ ನರ್ಸಿಂಗ್ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಾರ್ಯಾಚರಣೆಯ ವೇಳೆ, 380 ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದು, ಅವುಗಳಲ್ಲಿ ಕೇರಳದ 'RAW' ಅಧಿಕಾರಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಿಬ್ಬಂದಿ ಎಂದಿದ್ದ ಗುರುತಿನ ಚೀಟಿಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ಗಗನಸಖಿಗೇ ಕಿರುಕುಳ, ಪ್ರಯಾಣಿಕನಿಗೆ ಜೈಲು

ಹೆಚ್ಚುವರಿಯಾಗಿ, ಆರೋಪಿಯಿಂದ ಪಿಎಸ್‌ಐ ಸಮವಸ್ತ್ರ, ಪೊಲೀಸ್ ಶೂ, ಲೋಗೋ, ಪದಕ, ಬೆಲ್ಟ್, ಕ್ಯಾಪ್, 1 ಲ್ಯಾಪ್‌ಟಾಪ್ ಮತ್ತು 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments