ಮೆಟ್ರೋದಲ್ಲಿ ಯುವತಿ ಸಾಹಸ 
ರಾಜ್ಯ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಯುವತಿಯಿಂದ ಸೊಮರ್ ಸಾಲ್ಟ್ ಪ್ರದರ್ಶನ, ವಿಡಿಯೋ ವೈರಲ್

ಮೆಟ್ರೋ ರೈಲುಗಳಲ್ಲಿ ಯುವಕ-ಯುವತಿಯರ ಹುಚ್ಚಾಟ ಮುಂದುವರೆದಿದ್ದು, ಚುಂಬನ, ಆಲಿಂಗನ, ಸೀಟಿಗಾಗಿ ಗಲಾಟೆಯಂತಹ ಪ್ರಕರಣಗಳು ವರದಿಯಾಗುತ್ತಿರುವಾಗಲೇ ಇಲ್ಲೊಬ್ಬ ಯುವತಿ ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಪಲ್ಟಿ ಹೊಡೆಯುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ಯುವಕ-ಯುವತಿಯರ ಹುಚ್ಚಾಟ ಮುಂದುವರೆದಿದ್ದು, ಚುಂಬನ, ಆಲಿಂಗನ, ಸೀಟಿಗಾಗಿ ಗಲಾಟೆಯಂತಹ ಪ್ರಕರಣಗಳು ವರದಿಯಾಗುತ್ತಿರುವಾಗಲೇ ಇಲ್ಲೊಬ್ಬ ಯುವತಿ ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಪಲ್ಟಿ ಹೊಡೆಯುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಮೆಟ್ರೋ ರೈಲಿನಲ್ಲಿ ಯಾವುದೇ ರೀತಿಯ ಹುಚ್ಚಾಟಗಳು ನಡೆಯದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಕೂಡ ಯುವತಿ ಮೆಟ್ರೋ ಅಧಿಕಾರಿಗಳ ಪುನರಾವರ್ತಿತ ಎಚ್ಚರಿಕೆಯ ಹೊರತಾಗಿಯೂ, ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಪಲ್ಟಿ ಹೊಡೆಯುವ ಸಾಹಸ ಮಾಡಿ ಅದನ್ನು ವಿಡಿಯೋ ಮಾಡಿದ್ದಾಳೆ. ಅಲ್ಲದೆ ಈ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಮಿಶಾ ಶರ್ಮಾ ಎಂಬ ಅಥ್ಲೀಟ್ ಈ ವಿಡಿಯೋ ಮಾಡಿದ್ದು, ಈ ವಿಡಿಯೋ ಸಹ ಪ್ರಯಾಣಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮಿಶಾ ಅವರಂತಹ ವ್ಯಕ್ತಿಗಳ ಈ ಕ್ರಮಗಳು ಇತರ ಪ್ರಯಾಣಿಕರ ಪ್ರಯಾಣದ ಅನುಭವಕ್ಕೆ ಅಡ್ಡಿಪಡಿಸುತ್ತಿವೆ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT