ಲೋಕಾಯುಕ್ತ ಬಲೆಗೆ ಬಿದ್ದ ಕೆ ಟಿ ಶ್ರೀನಿವಾಸ ಮೂರ್ತಿ 
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ: ಬೆಂಗಳೂರಿನ ಕೆ.ಆರ್.ಪುರಂ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ್ ಮೂರ್ತಿ ಲೋಕಾಯುಕ್ತ ಬಲೆಗೆ

ನಗರದ ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು: ನಗರದ ಲೋಕಾಯುಕ್ತ ಪೊಲೀಸರು ಇಂದು ಮಂಗಳವಾರ ಕೆ ಆರ್ ಪುರಂ ತಾಲ್ಲೂಕು ಕಚೇರಿಯ ಸರ್ವೆ ಸೂಪರ್ ವೈಸರ್ ಕೆ ಟಿ ಶ್ರೀನಿವಾಸ ಮೂರ್ತಿಯವರ ಹಲವು ಮನೆಗಳ ಮೇಲೆ ದಾಳಿ ನಡೆಸಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಕೇಸನ್ನು ಕೆ ಟಿ ಶ್ರೀನಿವಾಸ ಮೂರ್ತಿಯವರ ದಾಖಲಿಸಲಾಗಿದ್ದು, ಇವರು 5 ಲಿಕ್ಕರ್ ಪರವಾನಗಿ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಶ್ರೀನಿವಾಸ ಮೂರ್ತಿಗೆ ಸಂಬಂಧಪಟ್ಟ ಆಸ್ತಿ ಮತ್ತು ಮನೆಗಳನ್ನು ಒಳಗೊಂಡ 14 ಕಡೆಗಳಲ್ಲಿ ಬೆಂಗಳೂರು ಮತ್ತು ತುಮಕೂರುಗಳಲ್ಲಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.

ಇಂದು ಶೋಧದ ವೇಳೆ ಪತ್ತೆಯಾದ ಹೆಚ್ಚುವರಿ ಆಸ್ತಿಗಳು: ಹೆಣ್ಣೂರು ಗ್ರಾಮದಲ್ಲಿ 2,000 ಚದರ ಅಡಿ ನಿವೇಶನವಿದ್ದು ಇದರ ಮೌಲ್ಯ 83,45 ಲಕ್ಷ ರೂ, 60 ಲಕ್ಷ ಮೌಲ್ಯದ ಆ ನಿವೇಶನದಲ್ಲಿ ನೆಲಮಹಡಿ ಮತ್ತು 2 ಮಹಡಿಯಲ್ಲಿ, ಕೊತ್ತನೂರು ಗ್ರಾಮದಲ್ಲಿ 1,142 ಚದರ ಅಡಿ ನಿವೇಶನ 10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. 

ನೆಲಮಂಗಲ ತಾಲ್ಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಮನೆಯನ್ನು ಕೂಡ ಶೋಧ ಮಾಡಲಾಗುತ್ತಿದ್ದು ಅದು ಅವರ ಅಕ್ಕನ ಗಂಡನ ಹೆಸರಿನಲ್ಲಿದೆ. ಶ್ರೀನಿವಾಸ ಮೂರ್ತಿಯವರು ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸವನ್ನು ಕೂಡ ಇರಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel