ರಾಜ್ಯ

ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಡಿಸಿಎಂ ಡಿಕೆ ಶಿವಕುಮಾರ್

Nagaraja AB

ಹಾಸನ: ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಜಲ ಸಂಪನ್ಮೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಸಕಲೇಶಪುರದ ಹೆಬ್ಬನಹಳ್ಳಿ ವಿದ್ಯುತ್ ಉಪ ಕೇಂದ್ರದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಡಿಸಿಎಂ, ವಿಶ್ವೇಶ್ವರಯ್ಯ ಜಲ ನಿಗಮ ವತಿಯಿಂದ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಕುಡಿಯುವ ನೀರಿನ ಯೋಜನೆ ವಿಳಂಬ ಆಗದಂತೆ ಕಾಮಗಾರಿ ಚುರುಕುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ವಿಶ್ವೇಶ್ವರಯ್ಯ ಜಲ ನಿಗಮ ಆಯೋಜಿಸಿದ್ದ ಈ ಸಭೆಯಲ್ಲಿ ಸಂಸದರಾದ ಡಿ ಕೆ ಸುರೇಶ್, ಪ್ರಜ್ವಲ್ ರೇವಣ್ಣ, ಶಾಸಕರಾದ ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸತ್ಯಭಾಮ ಮತ್ತಿತರ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು. 

ಸಭೆಗೂ ಮುನ್ನಾ  ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದ ಉಪ ಮುಖ್ಯಮಂತ್ರಿ, ವಿದ್ಯುತ್ ಉಪಕೇಂದ್ರ ಪರಿಶೀಲನೆ ನಡೆಸಿದರು.

SCROLL FOR NEXT