ಪ್ರಾತಿನಿಧಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಚಿಕ್ಕಮಗಳೂರು ನಗರ ಸಮೀಪದ ಕೊಪ್ಪ ಪಟ್ಟಣದ ಹಾಸ್ಟೆಲ್‌ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

ಶ್ರೀನಿವಾಸ್ ಅವರು ವಿದ್ಯಾಭ್ಯಾಸದಲ್ಲಿ ಉತ್ತಮನಾಗಿದ್ದನು ಮತ್ತು ಶಿಕ್ಷಕರು ಮತ್ತು ಆತನ ಸ್ನೇಹಿತರಲ್ಲಿ ಉತ್ತಮ ಹೆಸರು ಗಳಿಸಿದ್ದನು.

ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು, ಶಿಕ್ಷಕರು ಮತ್ತು ಹಾಸ್ಟೆಲ್ ಆಡಳಿತ ಮಂಡಳಿಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಆರಂಭಿಸಿದ್ದಾರೆ. ಕೊಪ್ಪ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT