ರಾಜ್ಯ

ಚಂದ್ರಯಾನ-3 ಲ್ಯಾಂಡಿಂಗ್ ನೇರ ಪ್ರಸಾರ: ಜವಾಹರಲಾಲ್ ನೆಹರು ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶ

Manjula VN

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದ ಅಂಗಳದ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಗರದಲ್ಲಿರುವ ಜವಾಹರಲಾಲ್ ನೆಹರು ತಾರಾಲಯದಲ್ಲಿ ಬೃಹತ್ ಪರದೆ ಅಳವಡಿಸಲಾಗಿದೆ.

ವೀಕ್ಷಣೆ ವೇಳೆ ಕನ್ನಡದಲ್ಲಿಯೇ ತಜ್ಞರ ವಿವರಣೆ, ವಿಶ್ಲೇಷಣೆಗಳೊಂದಿಗೆ ಸಾರ್ವಜನಿಕರು ಈ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಬಹುದು.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ಸಂಜೆ 5 ಗಂಟೆಗೆ ತಾರಾಲಯಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.‌ ಎಸ್‌ ಬೋಸರಾಜು ಅವರೂ ಕೂಡ ಭೇಟಿ ನೀಡಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲಿದ್ದಾರೆ.

ರಾಜ್ಯದ ಪ್ರಾದೇಶಿಕ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿಯೂ ಪ್ರಸಾರಕ್ಕೆ ಸಿದ್ದತೆ:
ಈ ನಡುವೆ ರಾಜ್ಯದ ಪ್ರಾದೇಶಿಕ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿಯೂ ಸಾರ್ವಜನಿಕರಿಗೆ ನೇರ ಪ್ರಸಾರಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಬೋಸರಾಜು ಅವರು ಸೂಚನೆ ನೀಡಿದ್ದಾರೆ.

ಸಚಿವರ ಸೂಚನೆಯ ಅನ್ವಯ ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ ಹಾಗೂ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಇನ್ನುಳಿದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲೂ ನೇರಪ್ರಸಾರದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

SCROLL FOR NEXT