ಸಾಂದರ್ಭಿಕ ಚಿತ್ರ 
ರಾಜ್ಯ

ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಮನೆಯ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಕಲಬುರಗಿ ನಗರದ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಕಲಬುರಗಿ: ಇಲ್ಲಿನ ಶರಣನಗರ ಬಡಾವಣೆಯಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಜೇವರಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ಗುರುವಾರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತರನ್ನು ಅಜಯ್ ಸಿಂಗ್ ಅವರ ಮನೆಯ ವಾಚ್‌ಮೆನ್ ಆಗಿದ್ದ 32 ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದೆ.

ತಾಲ್ಲೂಕಿನ ಪಟ್ಟಣ ಗ್ರಾಮದ ನಿವಾಸಿಯಾದ ದೇವೇಂದ್ರ ಅವರು ಕಳೆದ ನಾಲ್ಕೈ ದು ವರ್ಷಗಳಿಂದ ಡಾ. ಅಜಯ್ ಸಿಂಗ್ ಅವರ ಮನೆಯಲ್ಲಿ ವಾಚ್‌ಮೆನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

ಬುಧವಾರ ತಡ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದ್ದು, ಗುರುವಾರ ಬೆಳಿಗ್ಗೆ ಅಜಯ್ ಸಿಂಗ್ ಅವರ ಮನೆಯ ಅಡುಗೆ ತಯಾರಕ ಮರದಲ್ಲಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT