ಪಿಎಂ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ 
ರಾಜ್ಯ

ಚಂದ್ರಯಾನ-3 ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಇಸ್ರೊ: ಆ.26ರಂದು ಪ್ರಧಾನಿ ಬೆಂಗಳೂರಿಗೆ, ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ನಾಡಿದ್ದು ಆಗಸ್ಟ್ 26ರಂದು ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಬೆಂಗಳೂರು/ನವದೆಹಲಿ: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್​ ಯಶಸ್ವಿ ಹಿನ್ನೆಲೆ ನಾಡಿದ್ದು ಆಗಸ್ಟ್ 26ರಂದು ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಸದ್ಯ ದಕ್ಷಿಣಾ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ನಿರತರಾಗಿದ್ದಾರೆ. ನಿನ್ನೆ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗುತ್ತಿದ್ದಂತೆ ಜೊಹಾನ್ಸ್ ಬರ್ಗ್ ನಿಂದ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಅಲ್ಲದೆ ಅಲ್ಲಿಂದಲೇ ಇಸ್ರೊ ಅಧ್ಯಕ್ಷ ಸೋಮನಾಥ್ ಅವರಿಗೆ ಖುದ್ದು ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದರು.

ಇಂದು ಇಸ್ರೊಗೆ ಸಿಎಂ ಭೇಟಿ: ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣವಾದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್​​​​ ನೀಡಲಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಇಸ್ರೊ ಸಂಸ್ಥೆ, ಚಂದ್ರಯಾನ-3 ರೋವರ್ ಭಾರತದಲ್ಲಿಯೇ ತಯಾರಿಸಲ್ಪಟ್ಟಿದ್ದು, ಚಂದ್ರನ ಮೇಲೆ ನಡೆದಾಡಲು ತಯಾರಾಗಿದೆ. ಲ್ಯಾಂಡರ್ ನಿಂದ ಇಳಿದು ಚಂದ್ರನ ಮೇಲೆ ನಡೆದಾಡುತ್ತಿದೆ ಎಂದು ಟ್ವೀಟ್ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್