ಸಾಂದರ್ಭಿಕ ಚಿತ್ರ 
ರಾಜ್ಯ

ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮನೆ-ಮನಗಳಲ್ಲಿ ಭಕ್ತಿಯ ಪೂಜೆ, ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ಸೇವೆ

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಬೆಂಗಳೂರು: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಶ್ರಾವಣ ಮಾಸದ ಎರಡನೇ ಶುಕ್ರವಾರ ಆಚರಿಸುವ ಹಬ್ಬವೇ ವರಮಹಾಲಕ್ಷ್ಮಿ. ಬೆಂಗಳೂರಿನ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ, ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. 

ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್​ನ ಲಕ್ಷ್ಮಿ ದೇವಸ್ಥಾನ, ಕೆಆರ್​ಮಾರ್ಕೆಟ್​ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುನ್ನುರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮಿ ವೃತ, ಸ್ತ್ರೋತ್ರ ಅರ್ಚನೆ, ಮಹಿಳೆಯರಿಂದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮ ಪಠಣ, ಮಹಿಳೆಯರಿಗೆ ಬಾಗಿನ, ಅರಶಿನ ಕುಂಕುಮ ನೀಡುವ ಪದ್ಧತಿಗಳಿವೆ. ದೇವಿಗೆ ವಿವಿಧ ಸೇವೆಗಳನ್ನು ನಡೆಸಲಾಗುತ್ತಿದೆ.

ಹಬ್ಬದ ನಿಮಿತ್ತ ಮಾರುಕಟ್ಟೆಯಲ್ಲಿ ಬಾಳೆಎಲೆ, ಹೂವು, ಹಣ್ಣು ಹಾಗೂ ಇತರ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳ ಮಾರುಕಟ್ಟೆಗಳಲ್ಲಿ ಜನಜಂಗುಳಿ ಇದೆ. ಈ ಮಧ್ಯೆ ಬೆಲೆ ಏರಿಕೆ ಕೂಡ ಗ್ರಾಹಕರನ್ನು ತಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT