ಸಂವಾದ ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ 
ರಾಜ್ಯ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಶೀಘ್ರ ಆರಂಭವಾಗಲಿ: ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಗೊಳಿಸಬೇಕು ಮತ್ತು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಅದರ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶನಿವಾರ...

ಉಡುಪಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವನ್ನು ವಿಳಂಬ ಮಾಡದೆ ಶೀಘ್ರವೇ ಅನುಷ್ಠಾನಗೊಳಿಸಬೇಕು ಮತ್ತು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಅದರ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.

ಇಂದು ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ(ಎನ್‌ಜಿಒ) ಮಣಿಪಾಲದಲ್ಲಿ ಆಯೋಜಿಸಿದ್ದ ‘ಕರಾವಳಿ ಕರ್ನಾಟಕದಲ್ಲಿ ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಉತ್ತೇಜನ’ ಎಂಬ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಕಾರಗೊಂಡರೆ ಕಾರವಾರದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದರು.

ಏತನ್ಮಧ್ಯೆ, ಬೇಲೆಕೇರಿ ಬಂದರನ್ನು ಸಹ ಅಭಿವೃದ್ಧಿಪಡಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗದ ಉದ್ಯಮಿಗಳು ಮುಂಬೈ ಮತ್ತು ಗೋವಾ ಬಂದರುಗಳನ್ನು ಅವಲಂಬಿಸುವ ಬದಲು ಬೇಲೆಕೇರಿ ಬಂದರಿನ ಮೂಲಕ ತಮ್ಮ ಸರಕುಗಳನ್ನು ರಫ್ತು ಮಾಡಬಹುದು. ಉತ್ತರ ಕರ್ನಾಟಕದ ಉದ್ಯಮಿಗಳಿಗೆ ಇದು ಹೆಚ್ಚು ಲಾಭದಾಯಕ ಉದ್ಯಮವಾಗಲಿದೆ ಎಂದರು.

ಶೆಟ್ಟರ್ ಮಾತನಾಡಿ, ಅರಣ್ಯ ಭೂಮಿ ಇದೆ, ಪರಿಸರಕ್ಕೆ ಹಾನಿಯಾಗುತ್ತದೆ ಎಂಬ ಕಾರಣಕ್ಕೆ ಪರಿಸರವಾದಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(ಪಿಐಎಲ್) ದಾಖಲಿಸಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ನಿಲ್ಲಿಸಲು ಯತ್ನಿಸಿದರು. ಆದರೆ ರೈಲ್ವೆ ಮಾರ್ಗ ಹೆಚ್ಚು ಹಾನಿಯನ್ನುಂಟುಮಾಡುವುದಿಲ್ಲ. ಬದಲಿಗೆ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಪರಿಸರವಾದಿಗಳ ಹೋರಾಟಗಳು ಒಂದು ಪ್ರದೇಶದ ಅಭಿವೃದ್ಧಿಗೆ ಧಕ್ಕೆಯಾಗಬಾರದು ಎಂದು ಅವರು ಹೇಳಿದರು.

ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ 2002ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭೂಮಿಪೂಜೆ ನೆರವೇರಿಸಿದ್ದರು. ಆದರೆ ಪರಿಸರವಾದಿಗಳು ಹೈಕೋರ್ಟ್‌ನಲ್ಲಿ ಪಿಐಎಲ್‌ಗಳಿಂದಾಗಿ ಯೋಜನೆ ವಿಳಂಬವಾಯಿತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT