ವಶಕ್ಕೆ ಪಡೆದ ಚಿನ್ನಾಭರಣಗಳೊಂದಿಗೆ ಬೆಳಗಾವಿಯ ಮಾರ್ಕೆಟ್ ಪೊಲೀಸರು 
ರಾಜ್ಯ

ಬೆಳಗಾವಿ: ಮಾರ್ಕೆಟ್ ಪೊಲೀಸರಿಂದ ಕಳ್ಳನ ಬಂಧನ, 10 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳು ವಶಕ್ಕೆ 

ಬೆಳಗಾವಿಯ ಸಮರ್ಥ ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಮಾರ್ಕೆಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ನಿಪ್ಪಾಣಿ ನಿವಾಸಿ ಯಾಸೀನ್ ಹಾಶಿಮ್ ಶೇಖ್ (23) ಎಂದು ಗುರುತಿಸಲಾಗಿದೆ. 

ಬೆಳಗಾವಿ: ಬೆಳಗಾವಿಯ ಸಮರ್ಥ ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಮಾರ್ಕೆಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ನಿಪ್ಪಾಣಿ ನಿವಾಸಿ ಯಾಸೀನ್ ಹಾಶಿಮ್ ಶೇಖ್ (23) ಎಂದು ಗುರುತಿಸಲಾಗಿದೆ. 

ಬಂಧಿತ ಆರೋಪಿ ಆಗಸ್ಟ್ 20 ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸಮರ್ಥನಗರದ ಮನೆಗೆ ನುಗ್ಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಬಾಳುವ ವಸ್ತುಗಳನ್ನು ದೋಚಿದ್ದ ಎನ್ನಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ 231 ಗ್ರಾಂ ಚಿನ್ನಾಭರಣ ಮತ್ತು 140 ಗ್ರಾಂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ ಪ್ರಕರಣ  ಭೇದಿಸಿದ ಮಾರ್ಕೆಟ್ ಪೊಲೀಸ್ ತಂಡವನ್ನು ಪೊಲೀಸ್ ಆಯುಕ್ತ ಎಸ್ ಎನ್ ಸಿದ್ರಾಮಪ್ಪ ಅಭಿನಂದಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: 31 ಮಂದಿ ಸಾವು

ಉಸಿರಾಟದ ಸಮಸ್ಯೆಯಿಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

SCROLL FOR NEXT