ಸಿಎಂ ಸಿದ್ದರಾಮಯ್ಯ 
ರಾಜ್ಯ

ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಸರ್ಕಾರದ ಭರ್ಜರಿ ಸಿದ್ಧತೆ: ಸಿಎಂ ಸಿದ್ದರಾಮಯ್ಯ ಸಹಿತ ಸರ್ಕಾರದ ಹಲವು ಸಚಿವರು ಮೈಸೂರಿನಲ್ಲಿ ಮೊಕ್ಕಾಂ

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ನಾಡಿದ್ದು ಆಗಸ್ಟ್ 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್‌ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ. 

ಮೈಸೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ನಾಳೆ ಆಗಸ್ಟ್ 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್‌ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ. 

ಗೃಹಲಕ್ಷ್ಮೀ ಯೋಜನೆ ಕಾಂಗ್ರೆಸ್‌ನ ಪಂಚ ಗ್ಯಾರಂಟಿಗಳ ಪೈಕಿ ಮಹತ್ವದ್ದಾಗಿದೆ. ಅತಿ ಹೆಚ್ಚು ಫ‌ಲಾನುಭವಿಗಳು ಮಾತ್ರವಲ್ಲ, ಯೋಜನಾ ವೆಚ್ಚವೂ ಎಲ್ಲದಕ್ಕಿಂತ ಹೆಚ್ಚಿದೆ. ಲೋಕಸಭಾ ಚುನಾವಣೆಯನ್ನು ಸಹ ದೃಷ್ಟಿಯಲ್ಲಿಟ್ಟುಕೊಂಡು ಕೂಡ ಗೃಹಲಕ್ಷ್ಮೀ ಜಾರಿಗೆ ಕಾಂಗ್ರೆಸ್‌ ನಿರ್ಧರಿಸಿದ್ದು, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮೈಸೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಇಂದು ಬೆಳಗ್ಗೆ 10.30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1.45ಕ್ಕೆ ಕೆ.ಆರ್ ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ,ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.

ನಾಡಿದ್ದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3,50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 6.30ಕ್ಕೆ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿರುವ ರಾಜೀವ ನಗರದ ಆಲ್ -ಬರ್ದ ಸರ್ಕಲ್ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ 7.30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

ಕರ್ನಾಟಕ ಸರ್ಕಾರವು ಇದೇ ಬುಧವಾರ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಮಾಸಿಕ 2,000 ರೂಪಾಯಿಗಳ ಆರ್ಥಿಕ ನೆರವು ನೀಡುವ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 1.08 ಕೋಟಿ ಸಂಭಾವ್ಯ ಫಲಾನುಭವಿಗಳು 'ಗೃಹ ಲಕ್ಷ್ಮಿ' ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ, ಇದು ಕಾಂಗ್ರೆಸ್‌ನ ಐದು ಚುನಾವಣಾ ಪೂರ್ವ 'ಖಾತರಿ'ಗಳಲ್ಲಿ ಒಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾರಂಭದಲ್ಲಿ ಸುಮಾರು ಒಂದು ಲಕ್ಷ ಜನರು ಸೇರಲಿದ್ದಾರೆ, ಅಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ, ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರುವರು.

ಇದು ಪಕ್ಷದ ಕಾರ್ಯಕ್ರಮವಲ್ಲ: 'ಶಕ್ತಿ', 'ಗೃಹ ಜ್ಯೋತಿ' ಮತ್ತು 'ಅನ್ನಭಾಗ್ಯ' ಎಂಬ ಐದು 'ಖಾತರಿ'ಗಳಲ್ಲಿ (ಚುನಾವಣೆಯ ಪೂರ್ವ ಭರವಸೆಗಳು) ಮೂರನ್ನು ಸರ್ಕಾರ ಈಗಾಗಲೇ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಹೇಳಿದರು  'ಗೃಹ ಲಕ್ಷ್ಮಿ' ನಾಲ್ಕನೆಯದು. ಇದು ಸರ್ಕಾರಿ ಕಾರ್ಯಕ್ರಮವಾಗಿದೆ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮತ್ತು ಸಂಸತ್ತಿನ ಸದಸ್ಯರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ದಾಖಲಾದ 1.08 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗೆ ಸರ್ಕಾರ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುತ್ತಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರ 17,500 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT