ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಎಎಸ್‌ಐಸಿಸಿಯ ಸರ್ಜಿಕಲ್ ಸೊಸೈಟಿಯು ಬೆಂಗಳೂರಿನ ವಿಧಾನಸೌಧದ ಎದುರು ಆಯೋಜಿಸಿದ್ದ ಕಾರ್ ರ್ಯಾಲಿಗೆ ಡಿಜಿಪಿ ಸಿಐಡಿ ಎಂಎ ಸಲೀಂ ಚಾಲನೆ ನೀಡಿದರು 
ರಾಜ್ಯ

ಪ್ರತಿವರ್ಷ ಭಾರತದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ಡಿಜಿಪಿ ಎಂ ಎ ಸಲೀಂ

“ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ತಮ್ಮ ಇಡೀ ಜೀವನದಲ್ಲಿ ಅಂಗವೈಕಲ್ಯದಿಂದ ಹೋರಾಡುತ್ತಿದ್ದಾರೆ”ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಅಪರಾಧ ತನಿಖಾ ಇಲಾಖೆ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳ ಎಂಎ ಸಲೀಂ ಹೇಳುತ್

ಬೆಂಗಳೂರು: “ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ತಮ್ಮ ಇಡೀ ಜೀವನದಲ್ಲಿ ಅಂಗವೈಕಲ್ಯದಿಂದ ಹೋರಾಡುತ್ತಿದ್ದಾರೆ”ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ಅಪರಾಧ ತನಿಖಾ ಇಲಾಖೆ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳ ಎಂಎ ಸಲೀಂ ಹೇಳುತ್ತಾರೆ. 

ನಿನ್ನೆ ಭಾನುವಾರ ವಿಧಾನಸೌಧದಿಂದ ನಂದಿಬೆಟ್ಟದವರೆಗೆ ಹಮ್ಮಿಕೊಂಡಿದ್ದ ಕಾರು ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಸ್ತೆ ಅಪಘಾತಗಳ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ 50 ನೇ ವಾರ್ಷಿಕೋತ್ಸವದ ಅಂಗವಾಗಿ ರ್ಯಾಲಿಯನ್ನು ಆಯೋಜಿಸಲಾಗಿದೆ.

ಹೆಲ್ಮೆಟ್ ಅಥವಾ ಸೀಟ್ ಬೆಲ್ಟ್ ಧರಿಸದ ಕಾರಣ, ಅತಿ ವೇಗದ ಚಾಲನೆ ಅಥವಾ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅನೇಕ ಜನರು ರಸ್ತೆ ಅಪಘಾತಗಳಲ್ಲಿ ಮೃತಪಡುತ್ತಿದ್ದಾರೆ ಎಂದು ಸಲೀಂ ಹೇಳಿದರು. ವಾಹನ ಚಲಾಯಿಸುವಾಗ ಹೆಚ್ಚಿನ ಕಾಳಜಿ ವಹಿಸುವಂತೆ ಅವರು ಜನರಿಗೆ ಕರೆ ನೀಡಿದರು.

ರಸ್ತೆ ಅಪಘಾತಗಳಿಂದ ವಿಕಲಚೇತನರಾದವರು ತಮ್ಮ ಮುಂದಿನ ಬದುಕನ್ನು ಸಾಮಾನ್ಯವಾಗಿ ಬದುಕುವುದು ಸುಲಭವಲ್ಲ ಎಂದರು.

ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ ಡಾ.ವೆಂಕಟೇಶ್, ಸಾರ್ವಜನಿಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ರಸ್ತೆ ಅಪಘಾತಗಳು ಸಂಭವಿಸುವುದಿಲ್ಲ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಜನರು ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿ ತಮ್ಮ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT