ಅತ್ಯಾಚಾರ ಆರೋಪಿ ಪರಾರಿ 
ರಾಜ್ಯ

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನ

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ದಾವಣಗೆರೆ: ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹೌದು.. ಅತ್ಯಾಚಾರ ಆರೋಪಿಯೊಬ್ಬ ಕಳೆದ ವಾರ ಕರ್ನಾಟಕದ ದಾವಣಗೆರೆ ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಗಡಿ ಗೋಡೆ ಹಾರಿ ಪರಾರಿಯಾಗಿದ್ದ. ಈ ಘಟನೆ ಶುಕ್ರವಾರ ದಾವಣಗೆರೆ ಉಪ ಕಾರಾಗೃಹದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅತ್ಯಾಚಾರದ ಆರೋಪವನ್ನು ಎದುರಿಸುತ್ತಿರುವ 23 ವರ್ಷದ ಕೈದಿ ವಸಂತ್ - ಗೋಡೆಗೆ ಅಡ್ಡಲಾಗಿ ಹಾರಿ ಓಡಿಹೋಗುತ್ತಿರುವ ದೃಶ್ಯವು ಕ್ಯಾಮೆರಾದಲ್ಲಿ ಕಂಡುಬಂದಿದೆ.

‘ಉಪ ಕಾರಾಗೃಹದ ಗೋಡೆ ಜಿಗಿದಾಗ ಆರೋಪಿಯ ಕಾಲಿಗೆ ಪೆಟ್ಟುಬಿದ್ದರೂ, ಅಲ್ಲಿಂದ ಪರಾರಿಯಾಗಿದ್ದ. ಬಳಿಕ ದುಗ್ಗಾವತಿಯ ಸಂಬಂಧಿಕರ ಮನೆಯೊಂದರಲ್ಲಿ ಅಡಗಿದ್ದ. ಬೆಳಿಗ್ಗೆಯೇ ಕಾರ್ಯಾಚರಣೆ ನಡೆಸಿ ಬಂಧಿಸಿ, ಮತ್ತೆ ಜೈಲಿಗೆ ಕಳುಹಿಸಲಾಗಿದೆ’ ಎಂದು ಇನ್‌ಸ್ಪೆಕ್ಟರ್‌ ಗುರುಬಸವರಾಜ್ ತಿಳಿಸಿದರು.

24 ಗಂಟೆಗಳಲ್ಲೇ ಬಂಧನ
ನಗರ ಹೊರವಲಯದ ಕರೂರ ಪ್ರದೇಶದ ನಿವಾಸಿ ವಸಂತ ಶನಿವಾರ ಜೈಲಿನಿಂದ ಪರಾರಿಯಾಗಿದ್ದ. ಬಸವನಗರ ಠಾಣೆಯ ಇನ್‌ಸ್ಪೆಕ್ಟರ್‌ ಗುರುಬಸವರಾಜ್ ನೇತೃತ್ವದಲ್ಲಿ ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿತ್ತು. ಕಾನ್‌ಸ್ಟೆಬಲ್‌ ನಿಜಲಿಂಗಪ್ಪ ನೀಡಿದ ಖಚಿತ ಮಾಹಿತಿ ಆಧರಿಸಿ ಸಬ್‌ ಇನ್‌ಸ್ಪೆಕ್ಟರ್‌ ನಾಗರಾಜ ಮತ್ತು ಸಿಬ್ಬಂದಿಯು ಹರಿಹರ ತಾಲ್ಲೂಕಿನ ದುಗ್ಗಾವತಿ ಗ್ರಾಮದಲ್ಲಿ ಆರೋಪಿಯನ್ನು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಮಾರ್ಚ್‌ನಲ್ಲಿ ಹರ್ಯಾಣದ ಕುರುಕ್ಷೇತ್ರ ಜಿಲ್ಲಾ ಕಾರಾಗೃಹದಿಂದ ನಿರ್ವಹಣಾ ಕಾರ್ಯ ನಡೆಯುತ್ತಿರುವ ಪ್ರದೇಶದಿಂದ ಮೂವರು ಕೈದಿಗಳು ಪರಾರಿಯಾಗಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್