ಸಚಿವ ಪ್ರಿಯಾಂಕ್ ಖರ್ಗೆ 
ರಾಜ್ಯ

ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್‌' ಘಟಕ ಸ್ಥಾಪನೆ: ಕಾನೂನಿನ ವಿರುದ್ಧ ಹೋಗುವುದಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ

ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್‌' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ...

ಬೆಂಗಳೂರು: ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ 'ನಕಲಿ ಸುದ್ದಿ'ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ 'ಫ್ಯಾಕ್ಟ್ ಚೆಕ್‌' ಘಟಕ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಉತ್ತರಪ್ರದೇಶ ಸರ್ಕಾರವಲ್ಲ. ನಮ್ಮ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ಸರ್ಕಾರದ ನಿರ್ಣಯ ಕುರಿತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)ಗೆ ಪತ್ರ ಬರೆಯುತ್ತೇನೆಂದು ಹೇಳಿದ್ದಾರೆ.

ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ), ಆನ್ಲೈನ್ ನಲ್ಲಿ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಇರುವುದು ನಿಜ. ಆದರೆ ಅಂತಹ ವಿಷಯವನ್ನು ಗುರುತಿಸುವ ಹಾಗೂ ತೆಗೆದುಹಾಕುವ ಪ್ರಯತ್ನಗಳನ್ನು ಸರಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲದಿದ್ದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ. ಯಾವುದೇ ಮೇಲ್ವಿಚಾರಣಾ ಚೌಕಟ್ಟು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು, ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹಾಳು ಮಾಡಬಾರದು ಎಂದು ಹೇಳಿತ್ತು. ಅಲ್ಲದೆ, ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಹಾಗೂ ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸಲು ಸರ್ಕಾರಕ್ಕೆ ಒತ್ತಾಯಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT