ಸಿಎಂ ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಇಂದು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿರುವ ಅವರು, ಇಂತಹ ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಸರ್ಕಾರ ಎಚ್ಚರವಹಿಸಲಿದೆ ಎಂದು ಕೂಡ ಹೇಳಿದ್ದಾರೆ.

ಕೋಲಾರದಲ್ಲಿ ಕಳೆದ ವಾರ ಮರ್ಯಾದೆಗೇಡು ಹತ್ಯೆ ಪ್ರಕರಣ ನಡೆದಿದ್ದು ಮಗಳಲ್ಲೇ ತಂದೆ ಕೊಂದು ಆಕೆಯ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿಗಳು, ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ. ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. 

ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT