ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಪ್ರಹ್ಲಾದ್'ಗೆ ಮತ್ತೊಮ್ಮೆ ನೋಟಿಸ್ ಜಾರಿಗೆ ಪೊಲೀಸರು ಮುಂದು!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ಎರಡನೇ ಬಾರಿ ನೋಟಿಸ್ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಕರಣ ಸಂಬಂಧ ಪ್ರಹ್ಲಾದ್ ಅವರಿಗೆ ಆಗಸ್ಟ್ 12 ರಂದು ಹಲಸೂರು ಗೇಟ್ ಪೊಲೀಸರು ಮೊದಲ ನೋಟಿಸ್ ಜಾರಿ ಮಾಡಿದ್ದರು. ಆದರೆ, ಇಲ್ಲಿಯವರೆಗೆ ವಿಚಾರಣೆಗಾಗಿ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಧಿಕಾರಿಯೊಬ್ಬರು ಮಾತನಾಡಿ, ಅಗ್ನಿ ಅವಘಡ ಘಟನೆಯ ತನಿಖೆಯ ಜವಾಬ್ದಾರಿಯನ್ನು ಪ್ರಹ್ಲಾದ್ ಅವರಿಗೆ  ನೀಡಲಾಗಿದೆ. ಇದರಂತ ತನಿಖೆ ಸಂಬಂಧ ದಾಖಲೆಗಳ ಸಂಗ್ರಹ ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಮಾಹಿತಿ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವ್ಯಕ್ತಿಯೊಬ್ಬರಿಗೆ ಪೊಲೀಸರ ಮುಂದೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಎರಡನೇ ನೋಟೀಸ್ ನಂತರವೂ ಅಧಿಕಾರಿ ಹಾಜರಾಗದಿದ್ದರೆ, ಅಧಿಕಾರಿಯು ಅಸಹಕಾರ ತೋರುತ್ತಿದ್ದು, ತನಿಖೆಗೆ ಹಾಜರಾಗಲಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗುತ್ತದೆ. ನಂತರ ಅವರು ನ್ಯಾಯಾಲಯಕ್ಕೆ ಉತ್ತರಿಸಬೇಕಾಗುತ್ತದೆ. ಘಟನೆಯಲ್ಲಿ ಅಧಿಕಾರಿ ಆರೋಪಿ ಸ್ಥಾನದಲ್ಲಿಲ್ಲ. ಹೀಗಾಗಿ ಅವರನ್ನು ಬಂಧಿಸಲು ಸಾಧ್ಯವಿಲ್ಲ ತಿಳಿಸಿದ್ದಾರೆ.

ಈ ನಡುವೆ ನೋಟಿಸ್ ಸಂಬಂಧ ಪ್ರತಿಕ್ರಿಯೆ ಪಡೆಯಲು ಪ್ರಹ್ಲಾದ್ ಅವರನ್ನು ಸಂಪರ್ಕಿಸಲಾಯಿತಾದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಏತನ್ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ತೀವ್ರವಾಗಿ ಗಾಯಗೊಂಡಿರುವ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ (ಕ್ಯೂಎಎಲ್) ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯವನ್ನು ವಿಚಾರಿಸಿದರು. ನಂತರ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಈಗಲೂ ಶಿವಕುಮಾರ್ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್