ರಾಜ್ಯ

ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ; ಹಬ್ಬ ಆಚರಿಸಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್

Lingaraj Badiger

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬರುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಬುಧವಾರ ಚಾಲನೆ ನೀಡಲಾಗಿದ್ದು, ಇತ್ತ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಬೆಂಗಳೂರಿನ ತಮ್ಮ ಯಶವಂತಪುರ ಕ್ಷೇತ್ರದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅದ್ಧೂರಿ ಚಾಲನೆ ನೀಡಿ, ಹಬ್ಬ ಆಚರಿಸಿದ್ದಾರೆ.

ಬಿಜೆಪಿ ಮೊದಲನಿಂದಲೂ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ. ಇದರ ಮಧ್ಯೆಯೇ ಸೋಮಶೇಖರ್​ ಅವರು ಇಂದು ಲವಲವಿಕೆಯಿಂದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿರುವುದು ಬಿಜೆಪಿಗೆ ಇರುಸುಮುರುಸು ಉಂಟುಮಾಡಿದೆ.

ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ನಾನು ಸ್ವಲ್ಪ ಸೇವೆ ಮಾಡುತ್ತಿದ್ದೇನೆ. ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್ ಟಿ ಸೋಮಶೇಖರ್ ಅವರು ಹೇಳಿದ್ದಾರೆ.

ನನಗೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪ ಕಾಣಿಸುತ್ತಿಲ್ಲ. ಈ ಕಾರ್ಯಕ್ರಮದ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ 2,000 ರೂ. ನೀಡಲಾಗುತ್ತಿದೆ. ಯಾವುದೇ ರೀತಿಯ ಟೀಕೆಗಳನ್ನು ಮಾಡಲು ಜನರಿಗೆ ಅವಕಾಶ ನೀಡಿ. ಆದರೆ ಇದು ಸರ್ಕಾರಿ ಕಾರ್ಯಕ್ರಮವಾಗಿದೆ ಎಂದು ಶಾಸಕ ಸೋಮಶೇಖರ್ ಹೇಳಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ಶಾಸಕ ಸೋಮಶೇಖರ್ ಅವರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಅವರ ಹೆಚ್ಚಿನ ಬೆಂಬಲಿಗರು ಈಗಾಗಲೇ ಕಾಂಗ್ರೆಸ್‌ಗೆ ಸೇರಿದ್ದಾರೆ ಮತ್ತು ಅವರ ನಾಯಕ ಖಂಡಿತವಾಗಿಯೂ ಶೀಘ್ರದಲ್ಲೇ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿಕೊಂಡಿದ್ದಾರೆ.

SCROLL FOR NEXT