ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ತೀವ್ರ ಜ್ವರ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
Sumana Upadhyaya
Updated On : 30 Aug 2023, 8:53 pm

ಬೆಂಗಳೂರು: ತೀವ್ರ ಜ್ವರ ಹಿನ್ನೆಲೆ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಇಂದು ಬುಧವಾರ ಬೆಳಗಿನ ಜಾವ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದು ಮಾಡಲಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು, ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್​ಡಿಕೆ ಆಗಮಿಸಲಿದ್ದರು. ಆದರೆ ಈಗ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.

ಇದನ್ನೂ ಓದಿ: ಚಂದ್ರಯಾನ-3ರ ಯಶಸ್ಸಿನ ಕ್ರೆಡಿಟ್ ಪಡೆಯಲು ಕಾಂಗ್ರೆಸ್, ಬಿಜೆಪಿ ಪ್ರಯತ್ನಿಸುತ್ತಿವೆ: ಎಚ್‌ಡಿ ಕುಮಾರಸ್ವಾಮಿ

Advertisement

Advertisement

ಮೂರು ತಿಂಗಳ ಹಿಂದೆ ಸಹ ಆಸ್ಪತ್ರೆಗೆ ದಾಖಲು: ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡು ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement