ರಾಜ್ಯ

ಮಹಿಳೆ ಸ್ನಾನ ಮಾಡುತ್ತಿರುವುದನ್ನು ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯ ಬಂಧನ

Ramyashree GN

ಬಂಟ್ವಾಳ: ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವುದನ್ನು ರಹಸ್ಯವಾಗಿ ಚಿತ್ರೀಕರಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಂಟ್ವಾಳ ನಿವಾಸಿ ಜಗದೀಪ್ ಆಚಾರ್ಯ ಎಂದು ಗುರುತಿಸಲಾಗಿದ್ದು, ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಆಗಸ್ಟ್ 28ರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಮಹಿಳೆ ಸ್ನಾನ ಮಾಡುತ್ತಿರುವುದನ್ನು ರಹಸ್ಯವಾಗಿ ರೆಕಾರ್ಡ್ ಮಾಡಲು ಮೊಬೈಲ್ ಫೋನ್ ಬಳಸಿದ್ದಾನೆ ಎನ್ನಲಾಗಿದೆ. ಮಹಿಳೆ ಸಹಾಯಕ್ಕಾಗಿ ಕಿರುಚಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು.

ಈ ವೇಳೆ ಸ್ಥಳೀಯರಿಗೆ ಆತ ಯಾರೆಂದು ಪತ್ತೆಯಾಗಿರಲಿಲ್ಲ. ಕೊನೆಗೆ ಪೊಲೀಸರಿಗೆ ದೂರು ನೀಡಲಾಗಿತ್ತು.

ಈ ಕುರಿತು ಬಂಟ್ವಾಳ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT