ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಮಧುಬಂಗಾರಪ್ಪ ಮತ್ತಿತರರು 
ರಾಜ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಸಹಯೋಗದಲ್ಲಿ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು ಎಂದು ಸ್ಮರಿಸಿದರು.

ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೆ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು, ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಮಾಡುವುದು, ಜಾತಿ, ಧರ್ಮದ ನಡುವೆ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಮಾಡಲಾಗುತ್ತಿದೆ. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು. ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದಿದ್ದರು ಎಂದು ಸಿಎಂ ತಿಳಿಸಿದರು. 

ನಾರಾಯಣಗುರುಗಳು ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನ ನಿರ್ಮಿಸಿದರು. ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು. ವಿದ್ಯೆ ಕಲಿತು ಸ್ವತಂತ್ರರಾಗಿ, ಸಂಘಟಿತರಾಗಿ ಬಲಯುತರಾಗಿ ಎನ್ನುವುದು ನಾರಾಯಣಗುರುಗಳು  ಶೂದ್ರ-ದಲಿತ ಸಮುದಾಯಕ್ಕೆ ನೀಡಿದ ಅತ್ಯುನ್ನತ ಧ್ಯೇಯ ಎಂದರು. 

ನಾರಾಯಣಗುರುಗಳು ಒಂದು ಜಾತಿ, ಧರ್ಮಕ್ಕೆ ಸೇರಿದವರಲ್ಲ. ಅವರು ಜಾತಿ-ಧರ್ಮದ ತಾರತಮ್ಯಗಳನ್ನು ಮೀರಿದ ವಿಶ್ವಮಾನವ. ಹೀಗಾಗಿ ವಿಶ್ವ ಮಾನವ ನಾರಾಯಣಗುರುಗಳ ಜಯಂತಿಯನ್ನು ಸರ್ಕಾರವೇ ಆಚರಿಸಬೇಕು ಎಂದು ಆದೇಶ ಮಾಡಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗಳನ್ನು ಈಡೇರಿಸುವುದಾಗಿ ಸಿಎಂ ವೇದಿಕೆಯಲ್ಲಿಯೇ ಭರವಸೆ ನೀಡಿದರು.

ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಹೆಚ್.ಆರ್.ಗವಿಯಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT