ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು. 
ರಾಜ್ಯ

ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಮೈಸೂರು: ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಯಾವುದೇ ಸರ್ಕಾರ ಕೊಟ್ಟ ಭರವಸೆಗಳನ್ನು ಈಡೇರಿಸಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಮೈಸೂರಿನಲ್ಲಿ ಬುಧವಾರ ನಡೆದ ಗೃಹ ಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಚಾಲನೆ ನೀಡಿದರು.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ಅಧಿಕಾರಕ್ಕೆ ಬಂದ ಬಳಿಕ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತರುವುದಿಲ್ಲ ಎಂದು ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ, ಅಧಿಕಾರಕ್ಕೆ ಬಂದ 100 ದಿನಗಳಲ್ಲಿಯೇ ನಾಲ್ಕು ಭರವಸೆಗಳನ್ನು ಈಡೇರಿಸಿದ್ದೇವೆ. ಯಾವುದೇ ಸರ್ಕಾರ ಕೂಡ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಭರವಸೆಗಳನ್ನು ಈಡೇರಿಸಿರಲಿಲ್ಲ. ಈ ಮೂಲಕ ನಾವು ಬಿಜೆಪಿ ಹೇಳಿದ್ದು ತಪ್ಪು ಎಂಬುದನ್ನು ಸಾಬೀತುಪಡಿಸಿದ್ದೇವೆಂದು ಹೇಳಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಸೇವೆ ಗುರುವಾರದಿಂದ ಆರಂಭಗೊಂಡಿದೆ.

ಇದನ್ನೂ ಓದಿ: ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆ ತಲುಪುವಂತೆ ಮಾಡಲು ವಿಶೇಷ ಗಮನ ನೀಡಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿದರೆ ಕರ್ನಾಟಕ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ, ಈಗ ಯಾವುದೂ ದಿವಾಳಿಯಾಗಿಲ್ಲ. ನಾವು ಪ್ರಗತಿಯಾಗುತ್ತಿರುವ ರಾಜ್ಯ ಮತ್ತು ಮಹಿಳೆಯರ ಸಂತೋಷವನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ಸರಕಾರ ತನ್ನ ಚುನಾವಣಾ ಭರವಸೆಗಳನ್ನು ಈಡೇರಿಸಿದೆ. ತನ್ನ ಪ್ರಣಾಳಿಕೆಯನ್ನು ಮರೆತು ಹೋಗಿದ್ದ ಬಿಜೆಪಿಗಿಂತಲೂ ನಮ್ಮ ಪಕ್ಶ ಭಿನ್ನವಾಗಿದೆ.

ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ನಾವು ಪ್ರಣಾಳಿಕೆಯಲ್ಲಿ ನೀಡಿದ್ದ ಬಹುತೇಕ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೆವು. ಈ ಬಾರಿಯೂ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಉಳಿದ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿ ವೇಳೆಗೆ ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನೂ ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಸರ್ಕಾರಿ ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಪ್ರತೀನಿತ್ಯ ಮಹಿಳೆಯರು ಸಂತಸದ ಮುಖದೊಂದಿಗೆ ಪ್ರತೀನಿತ್ಯ ಪ್ರಯಾಣಿಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಯೋಜನೆಗಳ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ, ಕಳೆದ 100 ದಿನಗಳಲ್ಲಿ 48.5 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. 1.1 ಕೋಟಿಗೂ ಹೆಚ್ಚು ಮಹಿಳೆಯರು ಗೃಹ ಲಕ್ಷ್ಮಿಗಾಗಿ ನೋಂದಾಯಿಸಿಕೊಂಡಿದ್ದಾರೆ. 1.56 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಅನ್ನ ಭಾಗ್ಯ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ವರ್ಷ ಸರ್ಕಾರವು 56,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ 10 ಮಹಿಳೆಯರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಡಿಜಿಟಲ್ ಕಾರ್ಡ್ ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯ ಸಮಸ್ಯೆ, ನಿರುದ್ಯೋಗ ಮತ್ತು ಇತರ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದರು. ಇದು ನಮಗೆ ಐದು ಗ್ಯಾರಂಟಿ ಯೋಜನೆಗಳ ಸಿದ್ಧಪಡಿಸಲು ಸಹಾಯ ಮಾಡಿತು. ನಾವು ಐದು ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆಂದು ಹೇಳಿದರು.

ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಮಹಿಳೆಯರು ಆಗಮಿಸಿದ್ದರಿಂದ ಕೃಷ್ಣರಾಜ ಬುಲೇವಾರ್ಡ್ ರಸ್ತೆಯುದ್ದಕ್ಕಕೂ ನಿಂತೂ ಕಾರ್ಯಕ್ರಮದ ಹೊರಗೂ ಕಾಂಗ್ರೆಸ್ ನಾಯಕರ ಭಾಷಣ ಆಲಿಸಿದ್ದು ಕಂಡು ಬಂದಿತ್ತು.

ಏತನ್ಮಧ್ಯೆ, ಮೈಸೂರು ನಗರದ ಹೃದಯಭಾಗದಲ್ಲಿ, ವಿಶೇಷವಾಗಿ ಕೃಷ್ಣರಾಜ ಬುಲೇವಾರ್ಡ್ ರಸ್ತೆ, ಹುಣಸೂರು ರಸ್ತೆ, ಕುಕ್ಕರಹಳ್ಳಿ ಕೆರೆ ರಸ್ತೆ ಮತ್ತು ಜೆಎಲ್‌ಬಿ ರಸ್ತೆಯಲ್ಲಿ ಸಂಚಾರ ಪೊಲೀಸರು ವಿಐಪಿ ವಾಹನಗಳು ಮತ್ತು ಇತರ ಬೆಂಗಾವಲುಗಳ ಪ್ರವೇಶಕ್ಕೆ ವಾಹನಗಳ ಸಂಚಾರವನ್ನು ನಿಲ್ಲಿಸಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಗಳು ಉಂಟಾಗಿತ್ತು.

100 ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳು ಮಹಿಳೆಯರನ್ನು ಸ್ಥಳಕ್ಕೆ ಕರೆದೊಯ್ಯುತ್ತಿದ್ದವು, ಪ್ರಯಾಣಿಕರಿಗೆ ಬಸ್‌ಗಳಿಂದ ಇಳಿಯಲು ಸ್ಥಳಾವಕಾಶವಿಲ್ಲದೆ ಹರಸಾಹಸ ಪಡಬೇಕಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT