ಸದಾಶಿವನಗರದ ನೀವ್ ಅಕಾಡೆಮಿಗೆ ಶ್ವಾನದಳದಿಂದ ಪರಿಶೀಲನೆ 
ರಾಜ್ಯ

'ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ': ಶಾಲೆಗಳಿಗೆ ಬಂದ ಬೆದರಿಕೆ ಇಮೇಲ್ ನಲ್ಲಿ ಏನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಇಮೇಲ್ ಬೆದರಿಕೆ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದ್ದು ಅದರಲ್ಲಿ ಭಯೋತ್ಪಾದನೆಯ ಕಪ್ಪುಛಾಯೆ ಕಾಣಿಸುತ್ತಿದೆ. 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಇಮೇಲ್ ಬೆದರಿಕೆ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದ್ದು ಅದರಲ್ಲಿ ಭಯೋತ್ಪಾದನೆಯ ಕಪ್ಪುಛಾಯೆ ಕಾಣಿಸುತ್ತಿದೆ. 

ಖಾರಿಜೈಟ್ಸ್ ಎಂಬ ಮೂಲಭೂತವಾದಿ ಸಂಘಟನೆ ಹೆಸರಲ್ಲಿ ಇ-ಮೇಲ್ ಬಂದಿದೆ. ಎಲ್ಲಾ ಶಾಲೆಗೂ ಒಂದೇ ರೀತಿಯ ಇ- ಮೇಲ್ ಬಂದಿದೆ ಎಂದು ಹೇಳಲಾಗುತ್ತಿದೆ. 

ಇ-ಮೇಲ್‍ನಲ್ಲಿ ಏನಿದೆ: ನಿಮ್ಮನ್ನು ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ. ತಾಜ್ ಮೇಲೆ ದಾಳಿ ಮಾಡಿದಂತೆ ದಾಳಿ ಮಾಡುತ್ತೇವೆ . ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ ಎಂದು ಕೆಂಗೇರಿಯ ಚಿತ್ರಕೂಟ ಶಾಲೆಗೆ ಬಂದ ಬೆದರಿಕೆ ಇ-ಮೇಲ್‌ನಲ್ಲಿ ತಿಳಿಸಲಾಗಿದೆ.

ಶಾಲೆ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಿದ್ದೇವೆ. ನವೆಂಬರ್ 26ರಂದು ಅಲ್ಲಾಹನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ಲಕ್ಷಾಂತರ ಕಾಫಿರರ ಕುತ್ತಿಗೆಗೆ ಕತ್ತಿ ಹಿಡಿಯೋದರಲ್ಲಿ ಅವರು ಶಕ್ತಿಶಾಲಿಗಳಾಗಿದ್ದಾರೆ. ಅವನು ವಿಫಲನಾಗಿ ಬೀಳುತ್ತಾನೆ. ನೂರಾರು ಮುಜಾಹಿದ್​ಗಳು ಅಲ್ಲಾಹನ ಮಾರ್ಗದಲ್ಲಿ ಹೋರಾಡಲು ಸಜ್ಜಾಗಿದ್ದೇವೆ. ನೀವೆಲ್ಲರೂ ಅಲ್ಲಾಹನ ಶತ್ರುಗಳು. ನಾವು ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಹತ್ಯೆ ಮಾಡುತ್ತೇವೆ. ನೀವು ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳಿಲ್ಲ. ಅಲ್ಲಾಹನ ನೈಜ ಧರ್ಮವನ್ನು ಸ್ವೀಕರಿಸಿ. ದೇಗುಲಗಳು, ನಿಮ್ಮ ಮೂರ್ತಿಗಳು, ಬುದ್ಧನಿಂದ ಇನ್ಫಿನಿಟಿವರೆಗೆ ಸ್ಫೋಟಕಗಳೊಂದಿಗೆ ಅವರು ಬರುತ್ತಿದ್ದಾರೆ. ಬಿಸ್ಮಿಲ್ಲಾಹ್, ನಾವು ಇಡೀ ಭಾರತದಲ್ಲಿ ಅಲ್ಲಾಹನ ನೈಜ ಧರ್ಮವನ್ನು ಎಲ್ಲೆಡೆ ಹರಡಲಿದ್ದೇವೆ. ನಾವು ನಿಮ್ಮ ಮೇಲೆ ದಾಳಿಕೋರರನ್ನು ಕಳಿಸಿದ್ದೇವೆ. ತಾಜ್​ನಲ್ಲಿ ನಿಮ್ಮನ್ನು ಮುಳುಗಿಸಲು ಬರುತ್ತಿದ್ದೇವೆ. ಬಿಸ್ಮಿಲ್ಲಾಹ್, ನಾಳೆ ಪ್ರಪಂಚದಾದ್ಯಂತ ಸಾವಿರಾರು ಝಿಯೋನಿಸ್ಟ್​ಗಳು ಸಾಯಲಿದ್ದಾರೆ. ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಇಸ್ಲಾಂನ ಭಾರವಾದ ಖಡ್ಗಕ್ಕೆ ಸಿಲುಕಿ ಸಾಯಿರಿ. ಸತ್ಯನಿಷೇಧಿಗಳು ನಿಮ್ಮೆ ಮುಂದೆ ಸಿಕ್ಕಾಗ ಅವ್ರ ಶಿರಚ್ಛೇದ ಮಾಡಿರಿ. ಶಿರಚ್ಛೇದ ಮಾಡಿರಿ ಹಾಗೂ ಅವರ ಎಲ್ಲಾ ಬೆರಳುಗಳನ್ನೂ ಕತ್ತರಿಸಿ. ಬಹುದೇವಾರಾಧಕರು ನಿಮ್ಮ ವಿರುದ್ಧ ಹೋರಾಟ ಮಾಡುವಂತೆ ನೀವೂ ಅವ್ರ ವಿರುದ್ಧ ಹೋರಾಡಿರಿ. ಅಲ್ಲಾಹು ಅಕ್ಬರ್ ಎಂದು ಇಮೇಲ್ ನಲ್ಲಿ ಬೆದರಿಸಲಾಗಿದೆ.

ಸದ್ಯ ಎಲ್ಲಾ ಶಾಲೆಗಳಿಲ್ಲಿಯೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ಶಾಲೆ ಬಳಿ ಓಡೋಡಿ ಬಂದಿದ್ದಾರೆ. ಅಲ್ಲದೇ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.
ವಿರೋಧ ಪಕ್ಷ ನಾಯಕ ಆರ್ ಅಶೋಕ್: ಇದು ಭಾರತೀಯರಿಗೆ ಬೆದರಿಕೆ ಒಡ್ಡುವ ಸಂದೇಶವಾಗಿದೆ. ಯಾರು ಈ ರೀತಿ ಸಂದೇಶ ಕಳಿಸಿದ್ದಾರೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಸಂದೇಶದಿಂದ ಶಾಲೆಯ ಮಕ್ಕಳ ಪಾಲಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ದಾಳಿ ಮಾಡುವ ಬೆದರಿಕೆ ಸಂದೇಶಗಳು ಬಂದಿವೆ. ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದೇ ಈ ರೀತಿ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT