ಸಾಂಕೇತಿಕ ಚಿತ್ರ 
ರಾಜ್ಯ

ಮಡಿಕೇರಿ: ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವೈದ್ಯ ಸತೀಶ್ ಕಾರಿನಲ್ಲಿ ಶವವಾಗಿ ಪತ್ತೆ

ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ಮಡಿಕೇರಿ: ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 

ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯ ಸತೀಶ್ ಅವರು ಶವವಾಗಿ ಪತ್ತೆಯಾಗಿದ್ದಾರೆ. 

ಸತೀಶ್(47) ಅವರು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚಿಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು. 

ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು. ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಕ್ಕಿಬಿಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್