ಸಂಸದ ತೇಜಸ್ವಿ ಸೂರ್ಯ ಮತ್ತಿತರರು 
ರಾಜ್ಯ

ಬೆಂಗಳೂರಿಗೆ ಕಂಪನಿ ಸೆಕ್ರೇಟರೀಸ್ ಪ್ರಾದೇಶಿಕ ಕಚೇರಿ: ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ- ತೇಜಸ್ವಿ ಸೂರ್ಯ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್‌ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್‌ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ.

ನಗರದಲ್ಲಿ ಅಯೋಜಿಸಿರುವ ಎರಡು ದಿನಗಳ ಎಸ್ಐಆರ್ ಸಿ ಪ್ರಾದೇಶಿಕ ಕಾರ್ಪೋರೇಟ್ ಸಿಎಸ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಮಂದಿ ಕಂಪೆನಿ ಸೆಕ್ರೇಟರಿಗಳಿದ್ದು, ಬೆಂಗಳೂರು ನಗರಕ್ಕೆ ಪ್ರಾದೇಶಿಕ ಕಚೇರಿಯನ್ನು ಮಂಜೂರು ಮಾಡುವಂತೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಲಾಗುವುದು. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಪ್ರಾದೇಶಿಕ ಕೇಂದ್ರ ಆರಂಭವಾಗಲಿದೆ ಎಂದು ಭರವಸೆ ನೀಡಿದರು.  

ಬೆಂಗಳೂರು ನಗರ ಜಗತ್ತಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಅಗತ್ಯವಾಗಿರುವ ಮೂಲ ಸೌಕರ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಹಿನ್ನೆಡೆಯಾಗುತ್ತಿದೆ. ಮುಂದಿನ 25 ವರ್ಷಗಳಿಗೆ ಅನ್ವಯವಾಗುವಂತೆ ಬೆಂಗಳೂರು ನಗರದ ಬೆಳಣಿಗೆಗೆ ಪೂರಕವಾಗಿರುವ ಯೋಜನೆಗಳನ್ನು ರೂಪಿಸುವ ಪ್ರತ್ಯೇಕ ಸಂಸ್ಥೆ ಇಲ್ಲವಾಗಿದೆ. ಬಿಡಿಎ, ಬಿಎಂಆರ್‌ ಡಿಎ, ಬಿಬಿಎಂಪಿ ಸೇರಿದಂತೆ ಯಾವುದೇ ಸಂಸ್ಥೆಗಳು ಬೆಂಗಳೂರು ಅಭಿವೃದ್ದಿಗೆ ನೀಲನಕ್ಷೆ ರೂಪಿಸುತ್ತಿಲ್ಲ. ಇದರಿಂದಾಗಿ ಬೆಂಗಳೂರು ನಗರದಲ್ಲಿ ವ್ಯಾಪಕ ಸಮಸ್ಯೆಗಳು ತಲೆ ದೋರುತ್ತಿವೆ ಎಂದು ವಿಷಾದಿಸಿದರು.

ಬೆಂಗಳೂರು ನಗರದ ಸಂಚಾರಿ ವ್ಯವಸ್ಥೆ ಸುಧಾರಿಸಲು ಸೇತುವೆ, ಮೇಲ್ಸೇತುವೆ, ಸುರಂಗಗಳ ನಿರ್ಮಾಣ. ರಸ್ತೆಗಳ ಅಗಲೀಕರಣದಿಂದ ಸಾಧ್ಯವಿಲ್ಲ. ಜಗತ್ತಿನ ಬೇರೆ ಬೇರೆ ನಗರಗಳ ಅನುಭವವನ್ನು ನೋಡಿದರೆ ತ್ವರಿತ ಸಮೂಹ ಸಾರಿಗೆ ವ್ಯವಸ್ಥೆಯೇ ಇದಕ್ಕೆ ಮದ್ದು. ಮುಂದಿನ ಎರಡು ವರ್ಷಗಳಲ್ಲಿ ಆಡುಗೋಡಿಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ರೈಲಿನ ಮೂಲಕ 40 ನಿಮಿಷಗಳಲ್ಲಿ ತಲುಪಬಹುದಾಗಿದೆ ಎಂದರು.

ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾದ ಅಧ್ಯಕ್ಷ ಮನೀಶ್ ಗುಪ್ತಾ ಮಾತನಾಡಿ, ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ ಅಗ್ನಿವೀರರಿಗೆ ಉಚಿತವಾಗಿ ಕಂಪನಿ ಸೆಕ್ರೇಟರೀಸ್‌ ಶಿಕ್ಷಣ ನೀಡುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಅತಿ ಶೀಘ್ರದಲ್ಲಿ ಆರಂಭಿಸಲಾಗುವುದು. ಬೆಂಗಳೂರಿನ ಕಂಪೆನಿ ಸೆಕ್ರೇಟರೀಸ್‌ ಕಚೇರಿಯ ಎರಡನೇ ಮಹಡಿಯಲ್ಲಿ ಮಧ್ಯಸ್ಥಿಕೆ ಕೇಂದ್ರ ಆರಂಭಿಸಲಾಗುವುದು. ಇದರಿಂದ ಸಾಂಸ್ಥಿಕ ವಲಯದ ವ್ಯಾಜ್ಯಗಳ ಇತ್ಯರ್ಥಕ್ಕೆ ಅನುಕೂಲವಾಗಲಿದೆ ಎಂದರು.

ಕಂಪೆನಿ ಸೆಕ್ರೆಟರೀಸ್‌ ಆಫ್‌ ಇಂಡಿಯಾದ ಬೆಂಗಳೂರು ಚಾಪ್ಟರ್‌ ಅಧ್ಯಕ್ಷ ಪರಮೇಶ್ವರ್‌ ಭಟ್‌ ಮಾತನಾಡಿ, ಕಂಪೆನಿ ಸೆಕ್ರೆಟರಿ ಕೋರ್ಸ್ ನಲ್ಲಿ ಗಣನೀಯ ಬದಲಾವಣೆ ತರಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಪಠ್ಯ ಕ್ರಮ ಪರಿಷ್ಕರಿಸಲಾಗಿದೆ. ಶಿಕ್ಷಣದಲ್ಲಿ ಕೃತಕ ಬುದ್ದಿಮತ್ತೆ ಸೇರಿದಂತೆ ಅತ್ಯಾಧುನಿಕ ವಿಷಯಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!