ಮಾಜಿ ಸಚಿವ ಅಶ್ವತ್ಥ್ ನಾರಾಯಣ್ 
ರಾಜ್ಯ

ಎನ್‌ಇಪಿ ರದ್ದು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ತೀವ್ರ ಕಿಡಿ

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಪಡಿಸಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ರದ್ದುಪಡಿಸಿರುವ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಕ್ರಮ ಮತ್ತು ಶಿಕ್ಷಣ ನೀತಿ ಬೇರೆ, ಈ ಜ್ಞಾನ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಇಲ್ಲ. ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಎನ್‌ಇಪಿ ಅಳವಡಿಸಿಕೊಳ್ಳದ ರಾಜ್ಯ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಲಿಯುವ ಮತ್ತು ಕಲಿಸುವುದು ಇದು ರಾಷ್ಟ್ರಿಯ ಶಿಕ್ಷಣ ನೀತಿಯ ಪ್ರಮುಖ ಅಂಶ. ಹಳೆಯ ನೀತಿಯಲ್ಲಿ ಇದ್ದ ನ್ಯೂನತೆಗಳನ್ನು ಹೋಗಲಾಡಿಸಿ 34 ವರ್ಷಗಳ ಬಳಿಕ ಹೊಸ ನೀತಿ ತರಲಾಗಿತ್ತು. ಸಮಾನತೆ ಮತ್ತು ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಇದಕ್ಕಾಗಿ 3 ನೇ ರಾಷ್ಟ್ರಿಯ ಶಿಕ್ಷಣ ನೀತಿ ಜಾರಿ ಮಾಡಲಾಗಿತ್ತು. ತಯಾರಿ, ಅಧ್ಯಯನ, ಚರ್ಚೆ ಇಲ್ಲದೆ ಏಕಾಏಕಿ ರಾಷ್ಟ್ರಿಯ ಶಿಕ್ಷಣ ನೀತಿಯನ್ನು ಕೊನೆಗೊಳಿಸುತ್ತೇವೆ ಎಂದು 2024 ರಿಂದ ರಾಜ್ಯ ಶಿಕ್ಷಣ ನೀತಿ ತರುವ ಪ್ರಯತ್ನ ನಡೆಸಿರುವುದು ಖಂಡನೀಯ’ ಎಂದು ಹೇಳಿದರು.

ರಾಜ್ಯದಲ್ಲಿ ಎನ್‌ಇಪಿ ಯಶಸ್ವಿಯಾಗಿ ಅನುಷ್ಠಾನ ಆಗುತ್ತಿದೆ. ನಾಗಪುರ ಶಿಕ್ಷಣ, ಉತ್ತರ ಭಾರತದ ಶಿಕ್ಷಣ ನೀತಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ವಾಸ್ತವದಲ್ಲಿ ಎನ್‌ಇಪಿ ರಾಜ್ಯ ಸಮಿತಿಯಲ್ಲಿ ಇದ್ದವರೆಲ್ಲ ಕನ್ನಡಿಗರೇ, ರಾಜ್ಯದ ವಿದ್ಯಾರ್ಥಿಗಳ ಹಿತಕ್ಕಾಗಿ ಅತ್ಯುತ್ತಮ ನೀತಿಯನ್ನು ರೂಪಿಸಿದ್ದರು’ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ರಚಿಸಿರುವ ರಾಜ್ಯ ಶಿಕ್ಷಣ ನೀತಿಯ ಕಚೇರಿ ಎಲ್ಲಿದೆ? ಸಲಹೆ ಕೊಡಲು ಇಮೇಲ್‌ ಇದೆಯೇ? ವಿನಾಕಾರಣ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಹೊರಟಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ