ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ತಮಿಳುನಾಡಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹೊತ್ತಿನಲ್ಲೇ ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ತಮಿಳುನಾಡಿನಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹೊತ್ತಿನಲ್ಲೇ ಇತ್ತ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು.. ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮಳೆರಾಯ ಅಬ್ಬರಿಸಲಿದ್ದು,  ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಆದರೂ ಇದೇ ಸಂದರ್ಭದಲ್ಲಿ ಭಾರೀ ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಉದ್ಯಾನ ನಗರಿಯಾದ್ಯಂತ ದಟ್ಟಮೋಡಗಳು ಆವರಿಸಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ ರಾಜ್ಯದ ಹಲವು ಭಾಗಗಳಲ್ಲಿ ನಿನ್ನೆ ರಾತ್ರಿಯೂ ವರುಣನ ಸಿಂಚನವಾಗಿದ್ದು, ನಿನ್ನೆ ಸಂಜೆಯಿಂದ ಮೋಡ ಕವಿದ ವಾತಾವರಣ ಮುಂದುವರೆದಿದೆ.

ಬೆಂಗಳೂರು ಮಾತ್ರವಲ್ಲದೇ ಉತ್ತರ ಕನ್ನಡ, ಬಾಗಲಕೋಟೆ, ಉಡುಪಿ, ಗದಗ, ಕೊಪ್ಪಳ, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ವಿಜಯಪುರ, ಬೀದರ್, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬಳ್ಳಾರಿ, ಚಿಕ್ಕಬಳ್ಳಾಪುರಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ