ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ 

ಐಐಎಸ್ ಸಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 21 ವರ್ಷದ ಇಂಟಿಗ್ರೇಟೆಡ್ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿರುವ ಪುರುಷರ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಐಐಎಸ್ ಸಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 21 ವರ್ಷದ ಇಂಟಿಗ್ರೇಟೆಡ್ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕ್ಯಾಂಪಸ್‌ನಲ್ಲಿರುವ ಪುರುಷರ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. 

ಮೃತ ವಿದ್ಯಾರ್ಥಿಯನ್ನು ದೆಹಲಿ ಮೂಲದ ಡೈಮಂಡ್ ಕುಶ್ವಾಹ ಎಂದು ಗುರುತಿಸಲಾಗಿದೆ. ಅವರು ರಾಸಾಯನಿಕ ವಿಜ್ಞಾನ ವಿಷಯದಲ್ಲಿ ಇಂಟಿಗ್ರೇಟೆಡ್ ಪಿಎಚ್‌ಡಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಕುಶ್ವಾಹಾ ಶುಕ್ರವಾರ ಬೆಳಿಗ್ಗೆ ಅವರು ಕಟ್ಟಡದ ಆರನೇ ಮಹಡಿಯಿಂದ ಜಿಗಿಯುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆತನ ಪೋಷಕರಿಗೆ ತಿಳಿಸಲಾಗಿದ್ದು, ಅವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಸದಾಶಿವನಗರ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel