ಮಹದೇವಯ್ಯ 
ರಾಜ್ಯ

ಸಿಪಿ ಯೋಗೇಶ್ವರ್ ಬಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ನಾಪತ್ತೆ; ಅಪಹರಣ ಶಂಕೆ

ಬಿಜೆಪಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಭಾವ ಹಾಗೂ ಮೆಗಾಸಿಟಿ ನಿರ್ದೇಶಕ  ಮಹದೇವಯ್ಯ ಅವರು ಅನುಮಾನಾಸ್ಪದವಾಗಿ ಕಾಣೆಯಾಗಿದ್ದಾರೆ. 

ರಾಮನಗರ: ಬಿಜೆಪಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಬಾವ ಹಾಗೂ ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರು ಅನುಮಾನಾಸ್ಪದವಾಗಿ ಕಾಣೆಯಾಗಿದ್ದಾರೆ. 

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ‌ ಮನೆಗೆ ಬಂದು ತಂಗುತ್ತಿದ್ದರು. ಇಂದು ಇಂದು ಡಿಢೀರ್ ಕಾಣೆಯಾಗಿದ್ದಾರೆ.

ಮಹದೇವಯ್ಯ ಅವರನ್ನು ಯಾರೋ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತೋಟದ ಮನೆಗೆ  ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗ್ಗೆಯಿಂದ ಮಹದೇವಯ್ಯ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಕಾರು ಕೂಡಾ ನಾಪತ್ತೆಯಾಗಿದೆ. ಹೀಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಟವರ್ ಲೊಕೇಶನ್ ಟ್ರೇಸ್ ಆಗಿದ್ದು, ಇತ್ತ ಮನೆಯಲ್ಲಿ ಬೀರು ಓಪನ್ ಆಗಿದ್ದು, ಬೆಡ್ ರೂಮ್‌ನಲ್ಲಿ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿರುವುದು ಕಂಡುಬಂದಿದೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರ ಸಹೋದರ ಸಿ.ಪಿ.ರಾಜೇಶ್ ಅವರು, ತೋಟದ ಮನೆಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆಗಿತ್ತು. ಬೇರೆ ಬೇರೆ ಕಾರು ಓಡಾಡಿರುವ ಸಾಧ್ಯತೆ ಇದೆ. ಹೀಗಾಗಿ ಮಹದೇವಯ್ಯರನ್ನು ಅಪಹರಣ ಮಾಡಿರುವ ಅನುಮಾನ ಇದೆ. ಅದಕ್ಕೆ ನಾವು ಪೊಲೀಸರಿಗೆ ವಿಚಾರ ತಿಳಿಸಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT