ರಾಜ್ಯ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಘೋಷಣೆ: ಬಿಜೆಪಿ ವಿರೋಧ! 

Srinivas Rao BV

ಹಾಸನ: ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನಾಗಿ ಪ್ರಜ್ವಲ್ ರೇವಣ್ಣ ಅವರನ್ನು ಘೋಷಿಸಲಾಗಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ದೇವರಾಜೇಗೌಡ, ಜೆಡಿಎಸ್ ನಾಯಕರು ಪ್ರಜ್ವಲ್ ಅವರನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವುದನ್ನು ಒಪ್ಪುವುದಕ್ಕೆ ಬಿಜೆಪಿ ನಾಯಕರು, ಕಾರ್ಯಕರ್ತರು ತಯಾರಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಬಿಜೆಪಿ ಐದು ಲಕ್ಷ ಮತದಾರರನ್ನು ಹೊಂದಿದೆ. ಸ್ಥಳೀಯ ಬಿಜೆಪಿ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಅಭ್ಯರ್ಥಿಯ ಹೆಸರನ್ನು ಘೋಷಿಸಬಹುದಿತ್ತು. ಉಮೇದುವಾರಿಕೆ ವಿಚಾರದಲ್ಲಿ ಜೆಡಿಎಸ್ ನಾಯಕರು ಏಕಪಕ್ಷೀಯ ನಿರ್ಧಾರ ಕೈಗೊಂಡು ಪ್ರಮಾದ ಎಸಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕರ್ತರ ಬೆಂಬಲದ ಬಗ್ಗೆಯೂ ಬಿಜೆಪಿ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿರುದ್ಧ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಪ್ರಶ್ನೆಯೊಂದಕ್ಕೆ ಅವರು ಹೇಳಿದರು.

SCROLL FOR NEXT