ಸಿಎಂ ಸಿದ್ದರಾಮಯ್ಯ 
ರಾಜ್ಯ

798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಬೆಂಗಳೂರು: 798 ಕೋಟಿ ರೂ. ಐಜಿಎಸ್‌ಟಿ ಕಡಿತದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ರಾಜ್ಯಕ್ಕೆ ಮುಂಗಡವಾಗಿ ಪಾವತಿಸಿದ್ದ ಐಜಿಎಸ್‌ಟಿಯಲ್ಲಿ ಹಿಂಬಾಕಿ ಇದೆ ಎಂಬ ಕಾರಣ ನೀಡಿ 2022ರ ಡಿಸೆಂಬರ್‌ 26ರಂದು ರೂ.798.03 ಕೋಟಿಯನ್ನು ಮರುಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಈ ರೀತಿ ರಾಜ್ಯಕ್ಕೆ ಸಂದಾಯವಾಗಬೇಕಾದ ತೆರಿಗೆ ಪಾಲನ್ನು ಬಾಕಿ ಹೆಸರಿನಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದರಿಂದ ರಾಜ್ಯಗಳು ಆರ್ಥಿಕವಾಗಿ ಸಮಸ್ಯೆಗೆ ಸಿಲುಕುತ್ತವೆ ಎಂದು ಹೇಳಿದ್ದಾರೆ.

ರೂ.34,000 ಕೋಟಿಗಳಷ್ಟು ಮೊತ್ತದ ಐಜಿಎಸ್‌ಟಿ ಹಿಂಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇಷ್ಟೊಂದು ದೊಡ್ಡ ಮೊತ್ತದ ಹಿಂಬಾಕಿ ಉಳಿಯಲು ಕಾರಣಗಳೇನು? ಈ ರೀತಿ ಬೃಹತ್‌ ಮೊತ್ತದ ಹಿಂಬಾಕಿಯು ರಾಜ್ಯ ಸರ್ಕಾರಗಳ ಹಣಕಾಸು ನಿರ್ವಹಣೆಯ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಕಳವಳ ಮೂಡಿದೆ ಎಂದು ತಿಳಿಸಿದ್ದಾರೆ.'

ಐಜಿಎಸ್‌ಟಿ ಹಿಂಬಾಕಿಯ ಕುರಿತು ಸ್ಪಷ್ಟವಾಗಿ ಅರ್ಥೈಸಿಕೊಳ್ಳಬೇಕಿದೆ. ಈ ಕಾರಣದಿಂದ ಈಗ ಇರುವ ಒಟ್ಟು ಹಿಂಬಾಕಿ ಮತ್ತು ಅದನ್ನು ರಾಜ್ಯಗಳ ಮಧ್ಯೆ ಹಂಚಿಕೆ ಮಾಡುವಲ್ಲಿ ಅನುಸರಿಸುತ್ತಿರುವ ಸೂತ್ರದ ಕುರಿತು ಪಾರದರ್ಶಕವಾಗಿ ಮಾಹಿತಿ ಹಂಚಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

‘ಹಿಂಬಾಕಿಯನ್ನು ಒಂದೇ ಕಂತಿನಲ್ಲಿ ಕಡಿತ ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆಗಳು ಉದ್ಭವವಾಗುತ್ತವೆ. ಆದ್ದರಿಂದ ಹಿಂಬಾಕಿಯನ್ನು ಕಂತುಗಳಲ್ಲಿ ಮರುಭರಿಸಲು ಅವಕಾಶ ಕಲ್ಪಿಸಬೇಕು. ರಾಜ್ಯ ಸರ್ಕಾರಗಳ ಆರ್ಥಿಕ ಸ್ಥಿತಿ ಮೇಲೆ ತಕ್ಷಣ ಪರಿಣಾಮಗಳಾಗದಂತೆ ತಡೆಯಲು ಹಿಂಬಾಕಿಯನ್ನು ಹತ್ತು ಕಂತುಗಳಲ್ಲಿ ಕಡಿತ ಮಾಡುವ ಪದ್ಧತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈ ಸಮಸ್ಯೆಗಳನ್ನು ಪರಿಹರಿಸಲು ಪಾರದರ್ಶಕ ಮತ್ತು ಸಂಘಟಿತ ಪ್ರಯತ್ನ ನಡೆಸುವುದರಿಂದ ಆರ್ಥಿಕ ವ್ಯವಸ್ಥೆಯನ್ನು ಸುರಕ್ಷಿತವಾಗಿಡಬಹುದು ಎಂಬುದು ನಮ್ಮ ನಂಬಿಕೆ. ಈ ವಿಚಾರದಲ್ಲಿ ತಕ್ಷಣ ಮಧ್ಯ ಪ್ರವೇಶ ಮಾಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!