ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ 
ರಾಜ್ಯ

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಿ: ಬಿಬಿಎಂಪಿ ಮನವಿ

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ.

ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸುವಂತೆ ಯುವಜನರನ್ನು ಪ್ರೇರೇಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಎರಡು ದಿನ ವಿಶೇಷ ನೋಂದಣಿ ಅಭಿಯಾನ ಆರಂಭಿಸಿದೆ. ಅಭಿಯಾನವು ಡಿಸೆಂಬರ್ 2 ಮತ್ತು 3ರಂದು ನಡೆಯಲಿದೆ. ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಅಭಿಯಾನ ನಡೆಯಲಿದೆ.

ಯಲಹಂಕದ ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಅಂಗವಾಗಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತರು, ಮತದಾರರ ಪಟ್ಟಿಯಲ್ಲಿ ಯುವ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಟು ವಲಯಗಳಲ್ಲಿ ಆಯಾ ಕಚೇರಿಗಳಲ್ಲಿ ವಿಶೇಷ ಅಭಿಯಾನವನ್ನು ನಡೆಸಲಾಗುತ್ತಿದೆ. 18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಯುವ ಮತದಾರರ ನೋಂದಣಿ ಜೊತೆಗೆ ಡಿಸೆಂಬರ್ 3 ರಂದು ಕರಡು ಪಟ್ಟಿಗೆ ಪದವೀಧರರನ್ನು ಸೇರಿಸಲು ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯ ಅಂತಿಮ ಮತದಾರರ ಪಟ್ಟಿ ಡಿಸೆಂಬರ್ 30 ರಂದು ಹೊರಬೀಳಲಿದೆ,

18 ವರ್ಷ ವಯಸ್ಸಿನ ಎಲ್ಲರೂ ವೆಬ್ ಪೋರ್ಟಲ್: voters.eci.gov.in ಅಥವಾ ವೋಟರ್ ಹೆಲ್ಪ್‌ಲೈನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಸ್ವಯಂ-ನೋಂದಣಿ ಮಾಡಿಕೊಳ್ಳಬಹುದು, ಪ್ರತಿಯೊಬ್ಬರೂ ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು,

ಮುಂದಿನ ವರ್ಷ ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬುವವರು 'ಫಾರ್ಮ್ 6' ಅಡಿಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಒಮ್ಮೆ ದಾಖಲಾದರೆ, ಮುಂದಿನ ವರ್ಷದ ಜನವರಿ ವೇಳೆಗೆ ಅವನು/ಅವಳು 18 ವರ್ಷ ತುಂಬಿದ ತಕ್ಷಣ, ಸ್ವಯಂಚಾಲಿತವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುತ್ತಾರೆಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT