ಸಂಗಣ್ಣ ಕರಡಿ 
ರಾಜ್ಯ

ನಾನೇನೂ ಹರಿಶ್ಚಂದ್ರನಲ್ಲ, ಜಲಜೀವನ್ ಮಿಷನ್ ಯೋಜನೆ ಅಕ್ರಮದಲ್ಲಿ ನಾನೂ ಕೂಡ ಭಾಗಿ: ಸಂಸದ ಸಂಗಣ್ಣ ಕರಡಿ

ಕೇಂದ್ರದ ಮಹತ್ವಕಾಂಕ್ಷಿ  ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳ:ಕೇಂದ್ರದ ಮಹತ್ವಕಾಂಕ್ಷಿ  ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಮರ್ಪಕವಾಗಿಲ್ಲ. ರಾಜಕಾರಣಿಗಳೇ ಈ ಯೋಜನೆಯಲ್ಲಿ ಲೂಟಿ ಹೊಡೆದು, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳದಲ್ಲಿ ಶುಕ್ರವಾರ ಅಂಚೆ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದ ಅವರ, ನಮ್ಮಂಥ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿ ಈ ಯೋಜನೆಯನ್ನು ಹಾಳು ಮಾಡಿದ್ದಾರೆ. ಜಿಲ್ಲೆಯ ಯೋಜನೆಯಲ್ಲಿ ಪರಿಷ್ಕೃತ ಅಂದಾಜು ನಡೆದು ಹೊಸ ಡಿಪಿಆರ್ ಮಾಡಲಾಗಿದೆ. ಕಾಮಗಾರಿಯಲ್ಲಿ ನಾನೂ ಸೇರಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಸಂಸದ ಸಂಗಣ್ಣ ಕರಡಿ ಅವರು ತಮ್ಮ ಭ್ರಷ್ಟಾಚಾರವನ್ನು ಬಹಿರಂಗವಾಗಿ ಒಪ್ಪಿಕೊಂಡು ಹೇಳಿಕೆ ನೀಡಿದ್ದಾರೆ.

ಜೆಜೆಎಂ ಕಾಮಗಾರಿಯಲ್ಲಿ ಹಣವನ್ನು ಲೂಟಿ ಹೊಡೆಯಲಾಗುತ್ತಿದೆ. ಜೆಜೆಎಂ ಯೋಜನೆಯ ಕಾಮಗಾರಿಯಲ್ಲಿ ರಿವೈಸ್ ಎಸ್ಟಿಮೇಟ್​​​​ನಿಂದ ಹೊಸ ಡಿಪಿಆರ್ ಮಾಡಿಸುವವರೆಗೂ ಹಣ ಲೂಟಿ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 123 ಕೋಟಿ ರೂ. ಯೋಜನೆಗೆ ಮತ್ತೆ 6 ತಿಂಗಳಲ್ಲಿ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ. ಅಕ್ರಮದಲ್ಲಿ ಸಂಸದರಿಂದ ಹಿಡಿದು ಎಲ್ಲರೂ ಹಣ ದೋಚಿದ್ದಾರೆ. ಇದರಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದರು.

ನಾವೇನೂ ಹರಿಶ್ಚಂದ್ರನಲ್ಲ, ನ್ಯಾಯ ಅನ್ಯಾಯ ನೋಡಬೇಕು. ಅನ್ಯಾಯದಿಂದ ಹಣ ಗಳಿಸಿದವರು ನೆಮ್ಮದಿಯಿಂದ ನಿದ್ದೆ ಮಾಡಲ್ಲ. ದುಡಿದು ತಿನ್ನೋರು ನೆಮ್ಮದಿಯಿಂದ ನಿದ್ದೆ ಮಾಡುತ್ತಾರೆ. ನಾನು ಮಾಡಿದ ತಪ್ಪಿನ ಅರಿವು ನನಗಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT