ರಾಜ್ಯ

ಬೆಂಗಳೂರು: ಅತ್ತೆ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆ ಆತ್ಮಹತ್ಯೆ

ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಬೆಂಗಳೂರು: ಅತ್ತೆಯ ಕಿರುಕುಳ ತಾಳಲಾರದೆ ನವವಿವಾಹಿತ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಅನುಷಾ (23) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಗದೂರು ಗ್ರಾಮದ ಅನುಷಾ, ಪಕ್ಕದ ಊರಿನ ಪ್ರವೀಣ್ ಎಂಬುವವರೊಂದಿಗೆ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಈಕೆ ಪಿಯುಸಿ ವ್ಯಾಸಂಗ ಮಾಡಿದ್ದರೆ, ಪ್ರವೀಣ್ ಮಹದೇವಪುರದ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡಿಕೊಂಡು ಸಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದ. ಊರಿಗೆ ಹೋಗಿಬರುವುದನ್ನು ಮಾಡುತ್ತಿದ್ದ. ಒಂದು ವರ್ಷದಿಂದ ಅನುಷಾ ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ಈಕೆ ಪಾಲಕರ ವಿರೋಧದ ನಡುವೆಯೂ 2 ತಿಂಗಳ ಹಿಂದೆ ಮನೆ ಬಿಟ್ಟು ಬಂದು ಪ್ರವೀಣ್ ಜತೆ ಮದುವೆ ಆಗಿ ಸಿಂಗಯ್ಯನಪಾಳ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇವರ ಜತೆಗೆ ಪ್ರವೀಣ್ ತಾಯಿ ನಾಗಮ್ಮ ಇದ್ದರು. ಅನುಷಾ ಮನೆಯಲ್ಲೇ ಇದ್ದಳು.

ಮನೆ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಅತ್ತೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೇರೆ ಬೇರೆ ವಿಚಾರಗಳನ್ನು ಹಿಡಿದು ಜಗಳ ಮಾಡುತ್ತಿದ್ದರು. ಇದರಿಂದ ಬೇಸತ್ತು ಪುತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಅನುಷಾ ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಸಂಜೆ 5 ಗಂಟೆ ಸುಮಾರಿಗೆ ಮನೆಗೆ ಬಂದು ನೋಡಿದಾಗ ಅನುಷಾ ಶವವಾಗಿ ಪತ್ತೆಯಾಗಿದ್ದಾಳೆ. ಪ್ರವೀಣ್ ಅನುಷಾಳನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT