ಮಹದೇವಯ್ಯ ಶವವಾಗಿ ಪತ್ತೆ 
ರಾಜ್ಯ

ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವವಾಗಿ ಪತ್ತೆ!

ಬಿಜೆಪಿ ಎಂಎಲ್ ಸಿ ಸಿಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಬೆಂಗಳೂರು: ಬಿಜೆಪಿ ಎಂಎಲ್ ಸಿ ಸಿಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಮೃತದೇಹ ಇದೀಗ ಪತ್ತೆಯಾಗಿದ್ದು ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮ ಬಳಿ ಪತ್ತೆಯಾಗಿತ್ತು.

ಹೀಗಾಗಿ ಪೊಲೀಸರು ನಿರ್ಜನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಮಹದೇವಯ್ಯ ಅವರ ಮೃತದೇಹ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ‌ ಮನೆಗೆ ಬಂದು ತಂಗುತ್ತಿದ್ದರು. ಆದರೆ ಕಳೆದ ಡಿಸೆಂಬರ್ 2ರಂದು ಡಿಢೀರ್ ಕಾಣೆಯಾಗಿದ್ದಾರೆ. ಮಹದೇವಯ್ಯ ಅವರನ್ನು ಯಾರೋ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!