ಪರಮೇಶ್ವರ್ 
ರಾಜ್ಯ

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ: ಗೃಹ ಸಚಿವ ಪರಮೇಶ್ವರ್

ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

ಬೆಳಗಾವಿ: ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

545 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್‌ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರುಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು.

ಇಂದಿನಿಂದ ಬೆಳಗಾಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸುವುದಾಗಿ ಪರಮೇಶ್ವರ್​ ತಿಳಿಸಿದ್ದಾರೆ.

ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲರಿಗೂ ಮರು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ.

2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇನ್ನು ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ ಮತ್ತೆ ನಡೆಸಲು ನಿರ್ಧರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!