ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ದುರ್ಮರಣ

ನಗರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ಅತಿ ವೇಗದ ಚಾಲನೆಯಿಂದ 29 ವರ್ಷದ ಯುವಕನೋರ್ವ ಎಲೆಕ್ಟ್ರಾನಿಕ್ ಸಿಟಿ 1 ನೇ ಹಂತದ ಬಳಿ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ವೆಂಕಟೇಶ್ ಎಂದು ಗುರ್ತಿಸಲಾಗಿದೆ. ಮೃತ ವೆಂಕಟೇಶ್ ತನ್ನ ಸ್ನೇಹಿತರನ್ನು ಭೇಟಿ ಮಾಡಿ ಲಗ್ಗೆರೆಯಲ್ಲಿರುವ ತನ್ನ ನಿವಾಸಕ್ಕೆ ಹಿಂದಿರುಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದ ವೆಂಕಟೇಶ್ ವೇಗವನ್ನು ನಿಯಂತ್ರಿಸಲು ಸಾಧ್ಯವಾಗದೆ ಎಲೆಕ್ಟ್ರಾನಿಕ್ ಸಿಟಿ 1 ನೇ ಹಂತದ ಬಳಿ ಡಿವೈಡರ್'ಗೆ ರಭಸದಿಂದ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಮತ್ತೊಂದು ಘಟನೆ ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಖಾಸಗಿ ಶಾಲಾ ಬಸ್ ಚಾಲಕ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ಬಸವರಾಜ್ ಎಂದು ಗುರ್ತಿಸಲಾಗಿದೆ. ಶನಿವಾರ ರಾತ್ರಿ 7.30ಕ್ಕೆ ಅಂಜನಾಪುರ ರಸ್ತೆಯ ಬಳಿ ಘಟನೆ ಸಂಭವಿಸಿದೆ.

ಮೃತ ಬಸವರಾಜ್ ಅವರು ವಾಹನದ ಮೇಲಿನ ಸಮತೋಲನ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ರಾಜರಾಜೇಶ್ವರಿ ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ನಂತರ ನಿಮ್ಹಾನ್ಸ್ ಗೆ ಸ್ಥಳಾಂತರಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಉತ್ತರ ವಿಭಾಗದಲ್ಲಿ ವರದಿಯಾದ ಮತ್ತೊಂದು ಅಪಘಾತದಲ್ಲಿ, 24 ವರ್ಷದ ಯುವಕ ಮೃತಪಟ್ಟಿದ್ದಾನೆ. ತನ್ನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಮೃತ ಯುವಕನನ್ನು ಅಭಿಷೇಕ್ ಎಂದು ಗುರ್ತಿಸಲಾಗಿದೆ. ಈತ ತನ್ನ ಸ್ನೇಹಿತನೊಂದಿಗೆ ಓಲಾ ಕ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ. ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಳ್ಳಾರಿ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT