ರಾಜ್ಯ

ಮಿಚಾಂಗ್ ಚಂಡಮಾರುತ ಎಫೆಕ್ಟ್: ನಗರದಲ್ಲಿ ಇನ್ನೆರಡು ದಿನ ಚಳಿ ವಾತಾವರಣ

Manjula VN

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಮಿಚಾಂಗ್ ಚಂಡಮಾರುತ ಪರಿಣಾಮ ಬೀರಿದ್ದು, ಇದರ ಎಫೆಕ್ಟ್ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೂ ಪರಿಣಾಮ ಬೀರಿದೆ. ಹೀಗಾಗಿಯೇ ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ.

ನಿತ್ಯ ಬೆಳಗ್ಗೆ ಮತ್ತು ಸಂಜೆ ನಂತರ ತೀವ್ರ ಚಳಿ ಬೀಸುತ್ತಿದೆ. ಕೆಲವೆಡೆ ಸೋನೆ ಮಳೆ ಬರುವ ಲಕ್ಷಣಗಳು ಕಂಡು ಬರುತ್ತಿವೆ. ಈ ವಾತಾವರಣ ಮಂಗಳವಾರದವರೆಗೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.

ಬಂಗಾಳಕೊಲ್ಲಿ-ಅಂಡಮಾನ್ ಸಮುದ್ರ ಭಾಗದಲ್ಲಿ ಉಂಟಾಗಿರುವ ಮಿಚಾಂಗ್ ಚಂಡಮಾರುತ ಪ್ರಭಾವದಿಂದಾಗಿ ಬೆಂಗಳೂರಿನಲ್ಲಿ ವಾತಾವರಣ ಬದಲಾಗಿದೆ, ಡಿಸೆಂಬರ್ 6 ರವರೆಗೆ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಎಂದು ತಿಳಿಸಿದ್ದಾರೆ.

ಮೋಡ ಕವಿದ ವಾತಾವರಣದ ಜೊತೆಗೆ ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂಜಾನೆಯ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT