ಎಚ್.ಡಿ ರೇವಣ್ಣ 
ರಾಜ್ಯ

ಬೈಕ್ ಸವಾರನಿಗೆ ಅವಾಚ್ಯ ಶಬ್ದಗಳಿಂದ ಭವಾನಿ ನಿಂದನೆ: ರೇವಣ್ಣ, ಸೂರಜ್ ಕ್ಷಮೆಯಾಚನೆ!

ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರ ಜೆಡಿಎಸ್‌ ಶಾಸಕ ಎಚ್‌. ಡಿ. ರೇವಣ್ಣ ಮತ್ತು ಅವರ ಮಗ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಕ್ಷಮೆ ಕೇಳಿದರು

ಬೆಳಗಾವಿ: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪತ್ನಿ ಭವಾನಿ ಪರ ಜೆಡಿಎಸ್‌ ಶಾಸಕ ಎಚ್‌. ಡಿ. ರೇವಣ್ಣ ಮತ್ತು ಅವರ ಮಗ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಕ್ಷಮೆ ಕೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೇವಣ್ಣ, ಪತ್ನಿಯ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ ಎಂದರು. ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವನ ಬಳಿ ಜಖಂ ಆಗಿರುವುದಕ್ಕೆ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗುತ್ತಿದ್ದರೆ ಯಾರು ಹೊಣೆ? ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ ಎಂದರು.

‘ಬೈಕ್ ಸವಾರನೇ ಬಂದು ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗಾಗುತ್ತಿತ್ತು?, ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು.‌ ನಮ್ಮ‌ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡುವುದಿಲ್ಲ. ಬೇಕಂತಲೇ ಯಾರೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದರು.

ಕುಡಿದು ಬೈಕ್ ಡ್ರೈವ್ ಮಾಡಿಕೊಂಡು ಬಂದಿದ್ದಾರೆ. ಅವರೇ ಬಂದು ನೇರವಾಗಿ ಕಾರಿಗೆ ಗುದ್ದಿದ್ದಾರೆ. ಅವರ ಪ್ರಾಣಕ್ಕೆ ಹೆಚ್ಚು ಕಡಿಮೆ ಆಗಿದ್ರೆ ಏನ್ ಮಾಡ್ತಿದ್ರು? ಹೀಗಾಗಿ ಈ ವಿಚಾರವನ್ನ ದೊಡ್ಡದು ಮಾಡುವ ಅಗತ್ಯವಿಲ್ಲ ಎಂದಿದ್ದಾರೆ. ಬೈಕ್ ಅವನೇ ಬಂದು ಸೈಡ್ ನಿಂದ ಬಂದು ಗುದ್ದಿದ್ದಾನೆ,

ಸೂರಜ್ ರೇವಣ್ಣ ಮಾತನಾಡಿ, ‘ಅಪಘಾತದಲ್ಲಿ ಬೈಕ್ ಸವಾರನದ್ದೇ ತಪ್ಪಿದೆ. ಇದೊಂದು ಆಕ್ಸಿಡೆಂಟ್. ಇನ್ಸಿಡೆಂಟ್ ಅಲ್ಲ. ಇದನ್ನು ಯಾರೂ ಬೇಕೆಂದೇ ಮಾಡುವುದಿಲ್ಲ. ಈ ವೇಳೆ ನನ್ನ ತಾಯಿ ಬಳಕೆ ಮಾಡಿರುವ ಪದಗಳು ತಪ್ಪಾಗಿವೆ. ತಾಯಿ ಬಳಸಿರುವ ಪದಗಳಿಗಾಗಿ ಕ್ಷಮೆ ಕೇಳುತ್ತೇನೆ ಎಂದರು. ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಇದಕ್ಕಿಂತಲೂ ಹೆಚ್ಚು ಏನು ಮಾಡಬೇಕು? ಇದರಲ್ಲಿ ಬೈಕ್ ಸವಾರನದ್ದೇ ತಪ್ಪಿದೆ’ ಎಂದೂ ಸಮರ್ಥಿಸಿಕೊಂಡಿದ್ದಾರೆ.

ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ KA-03-NK-5 ನಂಬರಿನ ಕಾರಿಗೆ ಸಾಲಿಗ್ರಾಮದ ಬಳಿ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್ ಸವಾರನ ವಿರುದ್ಧ ಭವಾನಿ ರೇವಣ್ಣ ಗರಂ ಆದ್ರು. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್