ಸಿಎಂ ಸಿದ್ದರಾಮಯ್ಯ 
ರಾಜ್ಯ

ಹುಬ್ಬಳ್ಳಿ: ಹಜರತ್ ಬಾದ್ ಶಾ ಪೀರಾನ್ ದರ್ಗಾ ಅಭಿವೃದ್ಧಿಗೆ ಅಗತ್ಯ ಅನುದಾನ- ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.

ಹುಬ್ಬಳ್ಳಿ: ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.

ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣುತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ, ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ'' ಎಂದು ಹೇಳಿದರು.

ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು. ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ. ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಬಾಂಧವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ'' ಎಂದು ತಿಳಿಸಿದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, ಇವ ನಮ್ಮವ ಇವ ನಮ್ಮವ ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಶದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು'' ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT