ಸಂಗ್ರಹ ಚಿತ್ರ 
ರಾಜ್ಯ

ಸೈಬರ್ ಕಳ್ಳರಿಂದ ಹೈಕೋರ್ಟ್‌ ವಿಡಿಯೋ ಕಾನ್ಫರೆನ್ಸ್ ಹ್ಯಾಕ್: ಲೈವ್‌ ಸ್ಟ್ರೀಮಿಂಗ್‌ನಲ್ಲಿ ಹರಿದಾಡಿದ ಅಶ್ಲೀಲ ದೃಶ್ಯಗಳು!

ಸೈಬರ್ ಕಳ್ಳರು​ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿಗಳ ಅಪ್​ಲೋಡ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೊ ಕಾನ್ಫರೆನ್ಸ್‌ ಅನ್ನು ಹೈಕೋರ್ಟ್‌ ಮಂಗಳವಾರ ನಿರ್ಬಂಧಿಸಿದೆ.

ಬೆಂಗಳೂರು: ಸೈಬರ್ ಕಳ್ಳರು​ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲೂ ತಮ್ಮ ಕೈಚಳಕ ತೋರಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯಾವಳಿಗಳ ಅಪ್​ಲೋಡ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೊ ಕಾನ್ಫರೆನ್ಸ್‌ ಅನ್ನು ಹೈಕೋರ್ಟ್‌ ಮಂಗಳವಾರ ನಿರ್ಬಂಧಿಸಿದೆ.

ಈ ಸಂಬಂಧ ಮುಕ್ತ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು “ನಾವು ಎಲ್ಲಾ ಲೈವ್‌ ಸ್ಟ್ರೀಮಿಂಗ್‌ಗಳನ್ನು ನಿರ್ಬಂಧಿಸುತ್ತಿದ್ದೇವೆಂದು ಹೇಳಿದ್ದಾರೆ.

ವಿಡಿಯೊ ಕಾನ್ಫರೆನ್ಸ್‌ಗೂ ಅವಕಾಶ ಇರುವುದಿಲ್ಲ. ತಂತ್ರಜ್ಞಾನ ದುರ್ಬಳಕೆ, ಕೆಲವರಿಂದ ಅನುಚಿತ ವರ್ತನೆ ನಡೆದಿರುವುದು ದುರದೃಷ್ಟಕರ ಸಂಗತಿ. ಇದು ಅನಿರ್ಬಂಧಿತ ಪರಿಸ್ಥಿತಿಯಾಗಿದೆ. ಇದೆಲ್ಲದರ ನಡುವೆ ಕರ್ನಾಟಕ ಹೈಕೋರ್ಟ್‌ ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತೃತ ನೆಲೆಯಲ್ಲಿ ತಂತ್ರಜ್ಞಾನ ಬಳಕೆ ಮಾಡುವುದರ ಪರವಾಗಿ ಇರಲಿದೆ.

ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು, ನಮಗೆ ಸಹಕರಿಸಬೇಕು. ಈ ಸಂಬಂಧ ಕಂಪ್ಯೂಟರ್‌ ತಂಡ ಅಥವಾ ರಿಜಿಸ್ಟ್ರಿಗೆ ದೂರು ಕೊಂಡೊಯ್ಯಬೇಡಿ.. ವ್ಯವಸ್ಥೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ನಂತರ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್‌ ಭರತ್‌ ಕುಮಾರ್‌ ಅವರು, “ಸೈಬರ್‌ ಭದ್ರತಾ ಕಾರಣಗಳಿಗಾಗಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಎಲ್ಲಾ ಕಡೆ ವಿಡಿಯೊ ಕಾನ್ಫರೆನ್ಸ್‌ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ” ಎಂದು ತಿಳಿಸಿದರು.

ವಿಡಿಯೋ ಕಾನ್ಫರೆನ್ಸ್ ಆ್ಯಪ್​ ಹ್ಯಾಕ್‌ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಹೈಕೋರ್ಟ್ ಸಿಬ್ಬಂದಿ ಕೇಂದ್ರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT