ಸಚಿವ ರಾಮಲಿಂಗಾ ರೆಡ್ಡಿ 
ರಾಜ್ಯ

ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ

‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.

ಬೆಳಗಾವಿ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.

ವಿಧಾನಸಭೆಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಜೆಡಿಎಸ್‌ನ ಕರೆಮ್ಮ ಜಿ. ನಾಯಕ ಎತ್ತಿದ್ದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಬಿಡುಗಡೆ ಮಾಡಿರುವ ಅನುದಾನದ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ನಿರ್ದಿಷ್ಟ ಪ್ರಕರಣಗಳಿದ್ದರೆ ದೂರು ಸಲ್ಲಿಸಬಹುದು. ಆ ಕುರಿತು ತನಿಖೆ ನಡೆಸುತ್ತೇವೆ’ ಎಂದು ಹೇಳಿದರು.

‘ದೇವದುರ್ಗ ತಾಲ್ಲೂಕಿನ ಹಲವು ದೇವಸ್ಥಾನಗಳ ಅಭಿವೃದ್ಧಿ, ದುರಸ್ತಿಗೆ ಕಳೆದ ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆ ಆಗಿದೆ. ಹಲವೆಡೆ ಕಾಮಗಾರಿಗಳನ್ನು ನಡೆಸದೇ ಬಿಲ್‌ ಪಾವತಿಸಲಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗಿದ್ದಾರೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT