ಲೋಕಾಯುಕ್ತ (ಸಂಗ್ರಹ ಚಿತ್ರ) 
ರಾಜ್ಯ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು  ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು  ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.  ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ.

ಡಾ ಪ್ರಭಲಿಂಗ ಮಾನಕರ್ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಈ ಹಿಂದೆ ಕಲಬುರಗಿಯ ಆರ್‌ಸಿಎಚ್ ಆಗಿದ್ದು, ಈಗ ಯಾದಗಿರಿಯ ಡಿಎಚ್ಒ ಆಗಿರುವ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜತೆಗೆ ಯಾದಗಿರಿಯ ಮನೆ, ಕಚೇರಿ ಹಾಗೂ ಕಲಬುರಗಿ ಸಮೀಪದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಎಸ್ ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ತಪಾಸಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT