ಕರ್ನಾಟಕ ಹೈಕೋರ್ಟ್ 
ರಾಜ್ಯ

ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರ ಪಾಸ್‌ಪೋರ್ಟ್ ನವೀಕರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ​​ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ...

ಬೆಂಗಳೂರು: ಕ್ರಿಮಿನಲ್ ಕೇಸ್ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್ ​​ನೀಡುವುದು, ನವೀಕರಣ ಅಥವಾ ಮರು ವಿತರಣೆ ಮಾಡಲು ಸಾಧ್ಯವಿಲ್ಲ ಎಂಬ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ನಿಯಮವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಸೆಷನ್ಸ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಬಾಕಿ ಇರುವ ಸಂತೋಷ ಬೀಜಾಡಿ ಶ್ರೀನಿವಾಸ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ವ್ಯಕ್ತಿಯ ಕ್ರಮಿನಿನಲ್​ ಮೊಕದ್ದಮೆಯನ್ನು ಪರಿಗಣಿಸದೆ ಆತನಿಗೆ ಪಾಸ್‌ಪೋರ್ಟ್‌ ವಿತರಣೆ ಮಾಡಬಹುದು ಅಥವಾ ನವೀಕರಣ/ಮರು ನೀಡುವಂತೆ ಪಾಸ್‌ಪೋರ್ಟ್ ಕಾಯ್ದೆಯಲ್ಲಿ ಎಲ್ಲಿಯೂ ಹೇಳಿಲ್ಲ ಎಂದರು.

ಸೆಕ್ಷನ್ 6(2)(ಎಫ್) ಅಡಿಯಲ್ಲಿ ಪಾಸ್​ಪೋರ್ಟ್ ವಿತರಣೆಗೆ ನಿಯಮಗಳನ್ನು ರೂಪಿಸಲಾಗಿದೆ. ಈ ನಿಯಮಗಳ ಪ್ರಕಾರ​​ ಕ್ರಮಿನಿಲ್​ ಮೊಕದ್ದಮೆ ಎದುರಿಸುತ್ತಿರುವವರಿಗೆ ಹೊಸ ಪಾಸ್‌ಪೋರ್ಟ್, ನವೀಕರಣ ಅಥವಾ ಮರು ವಿತರಣೆ ನೀಡುವುದನ್ನು ನಿಷೇಧಿಸಲಾಗಿದೆ. ಈ ನಿಯಮಗಳನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಆದಾಗ್ಯೂ, ಸಂತೋಷಬೀಜಾಡಿ ಶ್ರೀನಿವಾಸ ಅವರು ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಿಚಾರಣೆ ನಡೆಸುತ್ತಿರವ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು ಮತ್ತು ಅಲ್ಪಾವಧಿಯ ಪಾಸ್‌ಪೋರ್ಟ್ ಅನ್ನು ನೀಡುವಂತೆ ಕೋರಬಹುದು. ಆದರೆ ಸೆಷನ್ಸ್ ನ್ಯಾಯಾಲಯವು ಅಂತಹ ಅರ್ಜಿಯನ್ನು ಕಾಯ್ದೆಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಪರಿಗಣಿಸಬೇಕು ಎಂದು ಹೈಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

SCROLL FOR NEXT