ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ: ಹೊಸ ಕಾರ್ಡ್ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು. 

ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ. 64 ರಿಂದ ಶೇ. 70 ರಷ್ಟಿದೆ. ಕೇಂದ್ರದಿಂದ ಶೇಕಡಾ 30 ರಿಂದ 36 ರಷ್ಟು ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ  5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ  ಒಂದೂವರೆ ಲಕ್ಷ ಹಣಕಾಸಿನ ನೆರವು ದೊರೆಯಲಿದೆ ಎಂದರು.

ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದುವರೆಗೆ 5 ಕೋಟಿ 54 ಸಾವಿರ ಜನರು ನೋಂದಣಿ ಮಾಡಿದ್ದು, ಅವರೆಲ್ಲರಿಗೂ ಕಾರ್ಡ ವಿತರಣೆ ಜರುಗಲಿದೆ. ತದನಂತರ‌ ನೋಂದಣಿ ಮಾಡಿದವರಿಗೂ‌ ಆರೋಗ್ಯ ‌ಕಾರ್ಡ್ ನೀಡಲಾಗುವುದು.  ಈ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲಿ ಪ್ರಪಥಮವಾಗಿ ಈ ಯೋಜನೆಯನ್ನು ರಾಜ್ಯ‌ ಸರ್ಕಾರ ಜಾರಿಗೊಳಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹಿತ ಯೋಜನೆಯ ಅನುಷ್ಠಾನಕ್ಕೆ ಕೈಜೋಡಿಸಿತು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ