ಮಣಿಕಂಠ ರಾಥೋಡ್ ವಶಕ್ಕೆ ಪಡೆದ ಪೊಲೀಸರು 
ರಾಜ್ಯ

ಕಾರು ಅಪಘಾತವನ್ನು ಹಲ್ಲೆ ಎಂದು ಸುಳ್ಳು ಹೇಳಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸರ ವಶ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡ್ ನ ಕಟ್ಟುಕಥೆ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್​ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ಪತ್ರಕರ್ತರ ಜೊತೆ ಮಾತನಾಡಲೂ ಅವಕಾಶ ಕೊಡದೆ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಕಾರು ಅಪಘಾತವನ್ನು ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಪೊಲೀಸ್ ತನಿಖೆ ವೇಳೆ ಬಟಾಬಯಲಾಗಿತ್ತು. ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಣಿಕಂಠನ ನೌಟಂಕಿ ಆಟ ಬಯಲಾಗಿದೆ. ಈ ಮೂಲಕ ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಕಾರು ಅಪಘಾತದಲ್ಲಿ ಗಾಯಗೊಂಡು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎಂಬುದು ಗೊತ್ತಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!