ಕಾರು-ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ 
ರಾಜ್ಯ

ಶಿರಸಿ: ಕಾರು-ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು...

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದ ಮಂಗಳೂರಿನ ರಾಮಕೃಷ್ಣ ಬಾಬುರಾವ್ (71), ವಿದ್ಯಾಲಕ್ಷ್ಮೀ ರಾಮಕೃಷ್ಣ(65), ಪುಷ್ಪಾ ಮೋಹನ ರಾವ್ (62), ಸುಹಾಸ್ ಗಣೇಶ ರಾವ್ (30), ಹಾಗೂ ಚೆನ್ನೈನ ಅರವಿಂದ(30) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT