ಸಾಂದರ್ಭಿಕ ಚಿತ್ರ 
ರಾಜ್ಯ

2022-2023ರಲ್ಲಿ ರಾಜ್ಯದಲ್ಲಿ 18,461 ಮಕ್ಕಳು ಶಾಲೆಯಿಂದ ಹೊರಗೆ...

ಕಳೆದ ಆರು ವರ್ಷಗಳಲ್ಲಿ ರಾಜ್ಯದಲ್ಲಿ 71,945 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ ಎಂದು ಪ್ರಾಥಮಿಕ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರು: ಕಳೆದ ಆರು ವರ್ಷಗಳಲ್ಲಿ ರಾಜ್ಯದಲ್ಲಿ 71,945 ವಿದ್ಯಾರ್ಥಿಗಳು ಶಾಲೆ ಬಿಟ್ಟಿದ್ದಾರೆ ಎಂದು ಪ್ರಾಥಮಿಕ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಕಾರ್ಯಕ್ರಮಗಳು ಮತ್ತು ಶಿಕ್ಷಣ ಹಕ್ಕು (ಆರ್‌ಟಿಇ) ನೀತಿಯ ಅನುಷ್ಠಾನದ ಹೊರತಾಗಿಯೂ, ದೇಶದಲ್ಲಿ ಅತಿ ಹೆಚ್ಚು ಶಾಲೆ ಬಿಟ್ಟವರ ಸಂಖ್ಯೆಯಲ್ಲಿ ರಾಜ್ಯ 7ನೇ ಸ್ಥಾನದಲ್ಲಿದೆ. 

ಶಿಕ್ಷಣ ಇಲಾಖೆಯಡಿ ಸಮಗ್ರ ಶಿಕ್ಷಣ ಕರ್ನಾಟಕ (SSK) ಒದಗಿಸಿದ ಮಾಹಿತಿಯ ಪ್ರಕಾರ, 2022-2023ರಲ್ಲಿ 18,461 ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆರ್‌ಟಿಇ ಕಾಯ್ದೆಯಡಿ ಕಡ್ಡಾಯವಾಗಿರುವ 6-14 ವರ್ಷದೊಳಗಿನವರಲ್ಲಿ  ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು 13,267 ಮಕ್ಕಳಿದ್ದಾರೆ.  ಅವರು ಶಾಲೆಯಿಂದ ಹೊರಗುಳಿದ ಅಥವಾ ಶಾಲೆಗೆ ದಾಖಲಾಗದ ಮಕ್ಕಳನ್ನು ಒಳಗೊಂಡಿರುತ್ತಾರೆ. ಉಳಿದಂತೆ 5,194 ವಿದ್ಯಾರ್ಥಿಗಳು 9,10 ಮತ್ತು ಪಿಯು ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. 

  

ಈ ಕುರಿತು ಮಾಹಿತಿ ನೀಡಿದ ಎಸ್‌ಎಸ್‌ಕೆಯ ರಾಜ್ಯ ಯೋಜನಾ ಅಧಿಕಾರಿ ಶ್ರೀಕಾಂತ್, ಜನವರಿಯಲ್ಲಿ  ಶಿಕ್ಷಕರ ನೆರವು ಮತ್ತು ಆಡಳಿತದಲ್ಲಿ ಲಭ್ಯವಿರುವ ಸಂಖ್ಯೆಗಳ ಮೂಲಕ ಈ ಅಧ್ಯಯನ ನಡೆಸಲಾಗಿದ್ದು, ಶಿಕ್ಷಕರ ಜೊತೆಗೆ, ಅಧಿಕಾರಿಗಳು ಇಟ್ಟಿಗೆ ಕಾರ್ಖಾನೆಗಳು, ಹೋಟೆಲ್‌ಗಳು, ಕೊಳೆಗೇರಿಗಳು ಮತ್ತು ಮಕ್ಕಳು ಸಾಮಾನ್ಯವಾಗಿ ಕೆಲಸ ಮಾಡುವ ಇತರ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.

'ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸುವ ಕುರಿತು ಸರಕಾರ ಕೈಗೊಂಡ ಉಪಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಒಮ್ಮೆ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಸಿಕ್ಕರೆ ಅವರ ಪೋಷಕರಿಗೆ ನೋಟಿಸ್‌ಗಳನ್ನು ನೀಡಲಾಗುತ್ತದೆ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗಲು ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ಹೇಳಿದರು. 

  

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿ ತಿಂಗಳ 1 ಮತ್ತು 15 ರಂದು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದ ಸಚಿವರು, ಮಕ್ಕಳು ಮತ್ತು ವಲಸೆ ಕುಟುಂಬಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮಗಳಿಗಾಗಿ 2021-2022ರ ಅವಧಿಯಲ್ಲಿ  208.08 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ಸೇರಿಸಲು ಶಿಕ್ಷಕರಿಗೂ ತರಬೇತಿ ನೀಡಬೇಕು ಎಂದು ಯುಎನ್‌ಐಸಿಎಫ್‌ನ ಶಿಕ್ಷಣ ತಜ್ಞ ಶೇಷಗಿರಿ ಕೆ.ಎಂ.ರಾವ್ ಹೇಳಿದ್ದಾರೆ. ಚೈಲ್ಡ್ ರೈಟ್ಸ್ ಟ್ರಸ್ಟ್ (ಸಿಆರ್‌ಟಿ) ನಿರ್ದೇಶಕ ನಾಗಸಿಂಹ ರಾವ್ ಮಾತನಾಡಿ, ಕೋವಿಡ್ ನಂತರದ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಸಮಾಲೋಚನೆ ಮಾಡಬೇಕು."ವರ್ಷದ ಕೊನೆಯಲ್ಲಿ ಸಮೀಕ್ಷೆಗಳನ್ನು ನಡೆಸಬೇಕು ಎಂದು ತಿಳಿಸಿದ್ದಾರೆ. ಶಾಲೆಗಳಿಂದ ಮಕ್ಕಳು ಹೊರಗುಳಿಯುವುದನ್ನು ನಿಲ್ಲಿಸುವುದು ಮಾತ್ರವಲ್ಲ, ಶಿಕ್ಷಕರನ್ನು ನೇಮಿಸಿ ಅವರಿಗೆ ತರಬೇತಿ ನೀಡಬೇಕು ಎಂದು ಶಿಕ್ಷಣ ತಜ್ಞ ಕೆಇ ರಾಧಾಕೃಷ್ಣ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT